ಕರಾವಳಿ

ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣ; ಕಾಂಗ್ರೆಸ್ ಸರಕಾರದ ವಿರುದ್ಧ ಕಿಡಿಕಾರಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ;ಹೇಳಿದ್ದೇನು?

271

ನ್ಯೂಸ್ ನಾಟೌಟ್ : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಿವಮೊಗ್ಗ ಈದ್ ಮಿಲಾದ್ ಸಂಘರ್ಷವನ್ನ ನಾವು ಖಂಡಿಸುತ್ತೇವೆ ಎಂದಿದ್ದಾರೆ.

ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಯಾವುದೇ ಗಲಾಟೆ ನಡೆಯದೇ ಶಾಂತಿಯುತವಾಗಿ ನಡೆದಿದೆ.ಆದರೆ ಶಿವಮೊಗ್ಗ ಗಲಾಟೆ ಹಿಂದೆ‌ ಮತಾಂಧ ಶಕ್ತಿಗಳ ಕೈವಾಡ ಇದೆ.ಈದ್ ಮೆರವಣಿಗೆಯಲ್ಲಿ ಹಿಂದೂಗಳ ಅಂಗಡಿ, ಮನೆಗಳ ಮೇಲೆ ದಾ *ಳಿಯಾಗಿದೆ.

ಈ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಈ ರೀತಿ ಆಗಿದೆ.ರಾಜ್ಯದಲ್ಲಿ ಪಾಕಿಸ್ತಾನ ಧ್ವಜ, ಪಾಕ್ ಪರ ಘೋಷಣೆ ಆಗ್ತಾ ಇದೆ.ಶಿವಮೊಗ್ಗ ಜಿಲ್ಲೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ಕಾಣ್ತಾ ಇವೆ ಎಂದು ಈ ಸಂದರ್ಭದಲ್ಲಿ ಸರಕಾರದ ವಿರುದ್ಧ ಕಿಡಿಕಾರಿದರು.

ಮಂಗಳೂರು ಕುಕ್ಕರ್ ಬಾಂಬ್ ನಲ್ಲೂ ಶಿವಮೊಗ್ಗದ ನಂಟಿದೆ.ಭಟ್ಕಳ ಬ್ರದರ್ಸ್ ರೀತಿಯಲ್ಲಿ ತೀರ್ಥಹಳ್ಳಿ ಬ್ರದರ್ಸ್ ಮೂಲಕ ಚಟುವಟಿಕೆಗಳಾಗುತ್ತಿವೆ.ಸರ್ಕಾರ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳದೇ ಇರೋದ್ರಿಂದ ಶಾಂತಿ ಸುವ್ಯವಸ್ಥೆ ವಿಫಲವಾಗಿದೆ ಎಂದರಲ್ಲದೇ ಈ ಘಟನೆಯಲ್ಲಿ ಆತಂಕವಾದದ ಸಾಧ್ಯತೆ ಇದೆಯಾ ಅಂತ ತನಿಖೆ ಮಾಡಬೇಕಾಗಿದೆ.ಇದರ ಪೂರ್ಣ ತನಿಖೆ‌ ಆಗಲಿ, ಇದು ಸರ್ಕಾರದ ಪೂರ್ಣ ವೈಫಲ್ಯತೆಯನ್ನು ಎತ್ತಿ ತೋರಿಸುತ್ತಿದೆ.ಸಿಎಂ ಮತಬೇಟೆಗಾಗಿ ಇದರ ವಿರುದ್ದ ಕ್ರಮ ಕೈಗೊಳ್ತಾ ಇಲ್ಲ ,ಹರ್ಷ ಮತ್ತು ಪ್ರವೀಣ್ ಹತ್ಯೆ ಬಳಿಕ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಂಡಿತ್ತು ಎಂದು ಹೇಳಿದರು.

ಈ ಸರ್ಕಾರ ಸಣ್ಣ ಮಟ್ಟದ ರಾಜಕಾರಣ ಮಾಡ್ತಾ ಇದೆ.ತುಷ್ಟೀಕರಣ ನೀತಿ ಮೂಲಕ ಮತಾಂಧ ಶಕ್ತಿಗಳಿಗೆ‌ ಮತ್ತೆ ಧೈರ್ಯ ಬಂದಿದೆ.ಕೋಲಾರದಲ್ಲಿ ತಲ್ಬಾರ್ ದ್ವಾರ ಹಾಕಿದಾಗಲೇ ಇವರು ಎಚ್ಚೆತ್ತುಕೊಳ್ಳಬೇಕಿತ್ತು.ಐಎನ್ಡಿ ಒಕ್ಕೂಟ ಹಾಗೂ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಗುಡುಗಿದರು.

See also  ಕರ್ನಾಟಕದ ಪೊಲೀಸ್‌ ಅಧಿಕಾರಿಗಳನ್ನು ಕೇರಳ ಪೊಲೀಸರು ವಶಕ್ಕೆ ಪಡೆದದ್ದೇಕೆ? ಆರೋಪಿಗಳನ್ನು ಬಂಧಿಸಲು ಕೇರಳಕ್ಕೆ ತೆರಳಿದ್ದ ಕರ್ನಾಟಕ ಪೊಲೀಸರು ಮಾಡಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget