ಕರಾವಳಿಕ್ರೈಂ

ಆಕೆ ಬಸ್ ಹತ್ತಿದ ಬಳಿಕ ಅನ್ಯಕೋಮಿನ ವಿದ್ಯಾರ್ಥಿಗೆ ಗುಂಪಿನಿಂದ ಹಲ್ಲೆ! ಮಂಗಳೂರಿನಲ್ಲಿ ಮತ್ತೆ ಸುದ್ದಿಯಾದ ನೈತಿಕ ಪೊಲೀಸ್ ಗಿರಿ

ನ್ಯೂಸ್ ನಾಟೌಟ್ : ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ದ‌.ಕ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ರಾಜೀವ್ ಗಾಂಧಿ ಸಂಕೀರ್ಣದ ಎದುರು ಘಟನೆ ನಡೆದಿದ್ದು ಎಂದು ವರದಿ ತಿಳಿಸಿದೆ.

ಅಭಿಲಾಷ್, ಪ್ರೇಮ್ ಭಂಡಾರಿ ಮತ್ತು ಸಂಜಯ್ ಬಂಧಿತರು ಎಂದು ಗುರುತಿಲಾಗಿದ್ದು, ಈ ನಾಲ್ಕು ಆರೋಪಿಗಳು ವಿದ್ಯಾರ್ಥಿನಿ ಜೊತೆ ಮಾತನಾಡಿದ ಅನ್ಯಕೋಮಿನ ವಿದ್ಯಾರ್ಥಿಗೆ ಆ.22 ರಂದು ಹಲ್ಲೆ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ನೈತಿಕ ಪೊಲೀಸ್ ಗಿರಿ ನಡೆಸಿದ ಮೂವರು ಆರೋಪಿಗಳ ಬಂಧನವಾಗಿದ್ದು, ಈ ಯುವಕರ ಗುಂಪು ಅನ್ಯ ಕೋಮಿನ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಮೂಡಬಿದ್ರೆಯ ರಾಜೀವ್ ಗಾಂಧಿ ಸಂಕೀರ್ಣದ ಎದುರು ಆ.22 ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‘

ಈ ಕುರಿತು ಮೂವರ ವಿರುದ್ಧ ಪ್ರಕರಣ ದಾಖಲಾಗಿತ್ತು, ಮೂಡುಬಿದಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಬೆಂಗಳೂರಿಗೆ ಹೋಗಲು ಬಸ್ ಸ್ಟ್ಯಾಂಡ್ ಗೆ ಬಂದಿದ್ದಳು ಎನ್ನಲಾಗಿದೆ. ಅದೇ ಸಮಯದಲ್ಲಿ ಆಗಮಿಸಿದ್ದ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿ ಹುಡುಗಿಯೊಂದಿಗೆ ಮಾತನಾಡಿದ್ದಾನೆ. ಮಾತನಾಡಿ ಆಕೆ ಬಸ್ ಹತ್ತಿದ ಬಳಿಕ ವಿದ್ಯಾರ್ಥಿಗೆ ಗುಂಪಿನಿಂದ ಹಲ್ಲೆ ನಡೆಸಲಾಗಿದೆ. ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

Related posts

ಸುಳ್ಯ: ಬಾಡಿಗೆಗೆಂದು ನಂಬಿಸಿ ಆಟೋ ರಿಕ್ಷಾ ಹತ್ತಿದ ವ್ಯಕ್ತಿ ಆಟೋವನ್ನೇ ಕದ್ದ..!

‘ನಾಗರಪಂಚಮಿ’ಯ ವಿಶೇಷ ದಿನದಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ‘ಇಸ್ರೋ’ ಹೆಸರಿನಲ್ಲಿ ಕಾರ್ತಿಕ ಪೂಜೆ..!, ಚಂದ್ರಯಾನ 3ರ ಯಶಸ್ಸಿಗಾಗಿ ಆಡಳಿತ ಮಂಡಳಿ, ಸಾರ್ವಜನಿಕರಿಂದ ಪ್ರಾರ್ಥನೆ..

ಸೌಜನ್ಯ ಹತ್ಯೆ ಆರೋಪಿಗಳ ಬಂಧನಕ್ಕಾಗಿ 22 ಕಿ.ಮೀ. ಕಾಲ್ನಡಿಗೆ ಜಾಥಾ, ಆಗಸ್ಟ್ 8ಕ್ಕೆ ಹಿಂದೂ ಹುಲಿ ಮಹೇಶ್ ಶೆಟ್ಟಿ ತಿಮರೋಡಿ ಸುಳ್ಯಕ್ಕೆ