ಕ್ರೈಂವೈರಲ್ ನ್ಯೂಸ್

ರಾತ್ರೋರಾತ್ರಿ ವಿದ್ಯಾರ್ಥಿನಿ ನೇಣಿಗೆ ಶರಣು..! ಒಂಟಿ ಯುವತಿಯ ನಿಗೂಢ ಸಾವಿಗೆ ಕಾರಣವೇನು?

220
pc cr; public tv

ನ್ಯೂಸ್ ನಾಟೌಟ್: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತೀರ್ಥಹಳ್ಳಿಯ (Thirthahalli) ಬಿಳುಕೊಪ್ಪ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಅಧೀಕ್ಷಾ (20) ಎಂದು ಗುರುತಿಸಲಾಗಿದ್ದು, ಯುವತಿ ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡ್ತಿದ್ದಳು ಎನ್ನಲಾಗಿದೆ.

(ಜ.18) ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಬೆಳಗ್ಗೆ ಯುವತಿ ಹೊರಗೆ ಬರದೇ ಇದ್ದಿದ್ದರಿಂದ ಅನುಮಾನಗೊಂಡು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದ ತಿಳಿಯಬೇಕಷ್ಟೆ.

https://newsnotout.com/2024/01/karnataka-rama-photo/
See also  ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿ ಮಹಿಳೆ ಪರಾರಿ! ಇಲ್ಲಿದೆ ವೈರಲ್ ವಿಡಿಯೋ!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget