ನ್ಯೂಸ್ ನಾಟೌಟ್ : ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಲ್ಲೂ ಎಳೆಯ ಪ್ರಾಯದ ಮಕ್ಕಳು ತನ್ನ ದುಡುಕಿನ ನಿರ್ಧಾರದಿಂದ ಹೆತ್ತವರಿಗೆ ಆಘಾತ ನೀಡುತ್ತಾರೆ. ಅಂತೆಯೇ ಇಲ್ಲೊಬ್ಬಳು ವಿದ್ಯಾರ್ಥಿನಿ ಪತ್ರ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.
ಮಂಗಳೂರಿನ ಅಪಾರ್ಟ್ ಮೆಂಟ್ ಸಮ್ಮುಚ್ಚಯವೊಂದರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಕೊರಳೊಡ್ಡಿದ್ದಾಳೆ. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.
ಬಾಲಕಿ ತನ್ನ ತಾಯಿ ಜೊತೆ ಅಪಾರ್ಟ್ ಮೆಂಟ್ ಸಮುಚ್ಚಯದಲ್ಲಿ ವಾಸವಾಗಿದ್ದಳು. ತಾಯಿ ಅದೇ ಅಪಾರ್ಟ್ ಮೆಂಟ್ ನಲ್ಲಿ ಕೆಲಸಕ್ಕಿದ್ದರು. ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಪತ್ರ ಬರೆದಿಟ್ಟಿದ್ದಾಳೆ. ಇದನ್ನೇ ಆಧಾರವಾಗಿಟ್ಟುಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.