ಕೊಲ್ಲೂರು: ಪಿಯುಸಿ ಪರೀಕ್ಷೆಗೆ ಹೆದರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಸುದೀಪ್ (18) ಎಂದು ಗುರುತಿಸಲಾಗಿದೆ.ನೇಣಿಗೆ ಶರಣಾದ ವಿದ್ಯಾರ್ಥಿಯು ನೆಂಪು ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ದ್ವಿತೀಯ ವರ್ಷದ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು ಕಾಲೇಜಿನ ಪರೀಕ್ಷೆಯ ಬಗ್ಗೆ ಭಯವಿದ್ದು ವಿದ್ಯಾಭ್ಯಾಸದಲ್ಲಿ ಹಿಂದುಳಿದ್ದು ಅದೇ ಕಾರಣದಿಂದ ಅಥವಾ ವೈಯಕ್ತಿಕ ಕಾರಣಗಳಿಂದ ಮನನೊಂದು ಗ್ರಾಮದ ಕಟ್ಟಿನಗದ್ದೆ ಎಂಬಲ್ಲಿರುವ ತನ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಛಾವಡಿಯಲ್ಲಿ ಮರದ ಪಕ್ಕಾಸ್ ಗೆ ನೈಲಾನ್ ಹಗ್ಗ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 12/2021 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.