ಕ್ರೀಡೆ/ಸಿನಿಮಾಕ್ರೈಂಬೆಂಗಳೂರು

ಕಬಡ್ಡಿ ಆಟವಾಡುತ್ತಿದ್ದಾಗಲೇ ಸಾವನ್ನಪ್ಪಿದ ವಿದ್ಯಾರ್ಥಿನಿ!

255

ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ದಿನೇ ದಿನ ಹೆಚ್ಚಾಗುತ್ತದೆ. ಇಲ್ಲೊಬ್ಬಳು ಕಾಲೇಜು ವಿದ್ಯಾರ್ಥಿನಿ ಕಬಡ್ಡಿ ಆಟ ಆಡುತ್ತಿರುವಾಗಲೇ ಅಂಕಣದಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಧಾರುಣ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಖಾಸಗಿ ಕಾಲೇಜು ಒಂದರಲ್ಲಿ ಕ್ರೀಡಾ ಉತ್ಸವ ಆಚರಣೆ ಅಂಗವಾಗಿ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿತ್ತು. ಕಾಲೇಜಿನ ಪ್ರಥಮ ಪಿಯುಸಿ ಕಲಿಯುತ್ತಿದ್ದ ಧಾರವಾಡ ಮೂಲದ ವಿದ್ಯಾರ್ಥಿನಿ ಸಂಗೀತಾ(17) ಎಂಬಾಕೆ ರೈಡ್‌ ಮಾಡುತ್ತಿರುವಾಗ ಎದುರಾಳಿ ತಂಡ ಆಕೆಯನ್ನು ಹಿಡಿಯಲು ಮುಗಿಬಿದ್ದರು. ಆಗ ಸಂಗೀತಾಗೆ ತಕ್ಷಣ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದಳು. ಕೂಡಲೇ ಆಕೆಯನ್ನು ಶಾಲಾ ಆಡಳಿತ ಮಂಡಳಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಸಂಗೀತಾ ಮೃತಪಟ್ಟಿದ್ದಾಳೆ.

See also  ಯುವತಿಯ ಪ್ರಜ್ಞೆ ತಪ್ಪಿಸಿ ಗ್ಯಾಂಗ್ ರೇಪ್ ..! ಬೆಂಗಳೂರಿನಲ್ಲಿ ಮತ್ತೊಂದು ಆಘಾತಕಾರಿ ಘಟನೆ
  Ad Widget   Ad Widget     Ad Widget   Ad Widget   Ad Widget   Ad Widget