Latestಕರಾವಳಿಮಂಗಳೂರು

ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿ ಕುಸಿದು ಬಿದ್ದು ಸಾವು, ಮಂಗಳೂರಲ್ಲೊಂದು ಹೃದಯ ವಿದ್ರಾವಕ ಘಟನೆ

852

ನ್ಯೂಸ್‌ ನಾಟೌಟ್‌: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಸೋಮವಾರ (ಜು.7) ಹೃದಯಾಘಾತಕ್ಕೆ ಡಿಪ್ಲೋಮಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯ ಸುರತ್ಕಲ್ ಬಳಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಅಫ್ತಾಬ್ (18) ಎಂದು ಗುರುತುಸಲಾಗಿದೆ. ಮಂಗಳೂರು ಹೊರವಲಯ ಸುರತ್ಕಲ್ ಕೃಷ್ಣಾಪುರದಲ್ಲಿ ಅಫ್ತಾಬ್ ಕುಟುಂಬ ನೆಲೆಸಿತ್ತು. ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಅಫ್ತಾಬ್ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಅಫ್ತಾಬ್ ಸುರತ್ಕಲ್ ಸೆಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಓದುತ್ತಿದ್ದ ಎಂದು ತಿಳಿದುಬಂದಿದೆ.

See also  ಪುತ್ತೂರು: ನವವಿವಾಹಿತೆ ಹೃದಯಾಘಾತಕ್ಕೆ ಬಲಿ!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget