ಕ್ರೈಂದೇಶ-ಪ್ರಪಂಚದೇಶ-ವಿದೇಶವಿಡಿಯೋವೈರಲ್ ನ್ಯೂಸ್

ವಿದ್ಯಾರ್ಥಿ ಜೊತೆ ಮದುವೆ ನಾಟಕ ಮಾಡಿದ್ದ ಶಿಕ್ಷಕಿ ಹುದ್ದೆಗೆ ರಾಜೀನಾಮೆ..! ಆಕೆ ಕುಲಸಚಿವರಿಗೆ ಮಾಡಿದ ಈ ಮೇಲ್ ನಲ್ಲೇನಿದೆ..?

ನ್ಯೂಸ್ ನಾಟೌಟ್ : ಪಶ್ಚಿಮ ಬಂಗಾಳದ ಕಾಲೇಜಿನ ಪ್ರಾಧ್ಯಾಪಕಿಯೊಬ್ಬರು ತರಗತಿಯಲ್ಲಿ ವಿದ್ಯಾರ್ಥಿಯನ್ನು ಮದುವೆಯಾಗುತ್ತಿರುವಂತೆ ತೋರಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ವ್ಯಾಪಕವಾಗಿ ಹರಿದಾಡಿತ್ತು.

ಇದರಿಂದ ಮನನೊಂದಿರುವ ಆ ಪ್ರಾಧ್ಯಾಪಕಿ, ಇದೀಗ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ.
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿರುವ ಮೌಲಾನಾ ಅಬುಲ್ ಕಲಾಮ್ ಆಜಾದ್‌ ತಾಂತ್ರಿಕ ವಿಶ್ವವಿದ್ಯಾಲಯದ ಮನೋವಿಜ್ಞಾನ ವಿಭಾಗದಲ್ಲಿ ಈ ಘಟನೆ ನಡೆದಿತ್ತು. ವಿಡಿಯೋ ಹರಿದಾಡುತ್ತಿದ್ದಂತೆ ವಿವಿ ಅಧಿಕಾರಿಗಳು ತನಿಖೆಗೆ ಆದೇಶಿಸಿಸಿದ್ದರು. ಅಲ್ಲದೇ ಪ್ರಾಧ್ಯಾಪಕಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದರು.

ಫೆಬ್ರುವರಿ 1 ರಂದು ಕುಲಸಚಿವರಿಗೆ ಈ ಮೇಲ್ ಮೂಲಕ ರಾಜೀನಾಮೆ ಪತ್ರ ರವಾನಿಸಿರುವ ಪ್ರಾಧ್ಯಾಪಕಿ ಘಟನೆಯ ನಂತರ ನಡೆದ ವಿದ್ಯಮಾನಗಳು ಮನಸ್ಸಿಗೆ ನೋವುಂಟು ಮಾಡಿವೆ. ಹಾಗಾಗಿ ರಾಜೀನಾಮೆ ನೀಡುತ್ತಿದ್ದೇನೆ. ಐದು ವರ್ಷ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿರುವುದಕ್ಕೆ ತೃಪ್ತಿ ಇದೆ ಎಂದು ತಿಳಿಸಿದ್ದಾರೆ.
‘ಇದೊಂದು ಮನಸ್ಸಿಗೆ ಸಂಬಂಧಿಸಿದ ವಿಷಯ ವಸ್ತು ಹೊಂದಿರುವ ನಾಟಕದ ದೃಶ್ಯವಾಗಿದೆ. ಪಠ್ಯದ ಭಾಗವಾಗಿ ಈ ಸನ್ನಿವೇಶವನ್ನು ಸೃಷ್ಟಿಲಾಗಿತ್ತೇ ಹೊರತು ಯಾವುದೂ ನಿಜವಲ್ಲ. ಆಂತರಿಕ ದಾಖಲೆಗಾಗಿ ವಿಡಿಯೊವನ್ನು ಚಿತ್ರೀಕರಿಸಲಾಗಿತ್ತು, ಆದರೆ ಅದು ಸೋರಿಕೆಯಾಗಿದೆ’ ಎಂದಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಲಸಚಿವರು, ಪ್ರಾಧ್ಯಾಪಕಿ ಮೇಲ್ ಮಾಡಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.

Click

ಗಡಿಪಾರು ಮಾಡಲಾದ 205 ಭಾರತೀಯರನ್ನು ಭಾರತಕ್ಕೆ ಕರೆತರಲಿರುವ ಅಮೆರಿಕದ ಮಿಲಿಟರಿ ವಿಮಾನ..! ಇಲ್ಲಿದೆ ಸಂಪೂರ್ಣ ಮಾಹಿತಿ

ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್..!​ ಪೊಲೀಸ್ ಕಂಟ್ರೋಲ್​ ರೂಂಗೆ ಕರೆ ಮಾಡಿದ್ದ ಸ್ಥಳೀಯರು..!

ಪುತ್ತೂರು: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ..! ಬೈಕ್ ಸವಾರ ಸಾವು..!

ರಾಹುಲ್‌ ದ್ರಾವಿಡ್‌ ಕಾರಿಗೆ ಗುದ್ದಿದ ಗೂಡ್ಸ್‌ ಆಟೋ..! ದೂರು ನೀಡದ ಟೀಂ ಇಂಡಿಯಾದ ಮಾಜಿ ಕೋಚ್‌..!

ವಿಶ್ವದ ಪ್ರಭಾವಿ ರಾಷ್ಟ್ರಗಳ ಪಟ್ಟಿ ಬಿಡುಗಡೆ..! ಭಾರತಕ್ಕೆ ಎಷ್ಟನೇ ಸ್ಥಾನ..?

ಮಹಾ ಕುಂಭಮೇಳ‌ದಲ್ಲಿ ನರೇಂದ್ರ ಮೋದಿ ಪುಣ್ಯಸ್ನಾನ, ಸಂತರೊಂದಿಗೆ ಚರ್ಚಿಸಲಿರುವ ಪ್ರಧಾನಿ

Related posts

ಸುಳ್ಯದ ಐಸ್ ಕ್ಯಾಂಡಿ ಬಾಯ್ ಇನ್ನಿಲ್ಲ, ಹಠಾತ್ ಇಹಲೋಕ ತ್ಯಜಿಸಿದ ಮನೆಮನೆಗೆ ಸೈಕಲ್ ಏರಿ ಐಸ್ ಕ್ರೀಂ ಹಾಕುತ್ತಿದ್ದ ಯುವಕ

ಇಬ್ಬರನ್ನು ಅಪಹರಿಸಿ ಕತ್ತು ಕೊಯ್ದು ನಕ್ಸಲರು..! ರಹಸ್ಯ ಮಾಹಿತಿ ನೀಡಿದವರ ಬಗ್ಗೆ ಪ್ರೆಸ್ ನೋಟ್ ಬಿಡುಗಡೆ ಮಾಡಿದ ನಕ್ಸಲರು..!

ವಿಟ್ಲ: ಅಪ್ರಾಪ್ತ ದಲಿತ ಬಾಲಕಿ ಮೇಲೆ 4 ವರ್ಷದಿಂದ ನಿರಂತರ ಅತ್ಯಾಚಾರ, ಅತ್ಯಾಚಾರ ನಡಿತಿದ್ರೂ ಪೋಷಕರಿಗೆ ಗೊತ್ತೇ ಇಲ್ಲ..!