ನ್ಯೂಸ್ ನಾಟೌಟ್ : ಪೋಷಕರೇ ನಿಮ್ಮ ಮಕ್ಕಳ ಮೇಲೆ ನಿಗಾ ಇರಲಿ. ಮಕ್ಕಳು ಎಲ್ಲಿ ಹೋಗುತ್ತಾರೆ? ಏನು ಮಾಡುತ್ತಾರೆ ಎಂದು ತಿಳಿದುಕೊಳ್ಳಲೇಬೇಕು. ಶಾಲೆ-ಕಾಲೇಜಿಗೆಂದು ಮನೆಯಿಂದ ತೆರಳುವ ನಿಮ್ಮ ಮಕ್ಕಳು ನಿಜವಾಗಿಯೂ ಶಾಲೆ-ಕಾಲೇಜಿಗೆ ಹೋಗುತ್ತಿದ್ದಾರಾ? ಇಲ್ಲವಾ? ಎಂದು ನೀವು ತಿಳಿದುಕೊಳ್ಳಬೇಕು. ನಿಮ್ಮ ನಿರ್ಲಕ್ಷ್ಯದಿಂದ ಮಕ್ಕಳು ತಪ್ಪು ದಾರಿಯಲ್ಲಿ ನಡೆದರೆ ಇದಕ್ಕೆ ನೇರ ನೀವೇ ಹೊಣೆಯಾಗುತ್ತೀರಿ.
ಇದೀಗ ಬೆಂಗಳೂರಿನ ಹಲವು ಶಾಲೆಗಳಲ್ಲಿ ವಿದ್ಯಾರ್ಥಿಗಳ ಬ್ಯಾಗ್ ಪರಿಶೀಲನೆ ನಡೆಸಿದ ಶಿಕ್ಷಕರು ಒಂದು ಕ್ಷಣ ಶಾಕ್ ಆಗಿದ್ದಾರೆ. ಬ್ಯಾಗ್ನಲ್ಲಿ ಪತ್ತೆಯಾದ ವಸ್ತುಗಳನ್ನು ಕಂಡು ಶಿಕ್ಷಕರು ಈ ವಿಷಯವನ್ನು ಶಾಲಾ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಪೋಷಕರಿಗೆ ಮಕ್ಕಳ ನಡವಳಿಕೆ ಮೇಲೆ ನಿಗಾ ಇರಿಸುವಂತೆ ಸಲಹೆ ನೀಡಿದೆ. ಇದರ ಜೊತೆಗೆ ಮಕ್ಕಳ ಬ್ಯಾಗ್ಗಳನ್ನು ಪರಿಶೀಲನೆ ಮತ್ತು ಅವರ ಶಾಲಾ ಹಾಜರಾತಿ ಬಗ್ಗೆಯೂ ಗಮನ ನೀಡುವಂತೆ ಸೂಚನೆ ನೀಡಿದೆ. ಅದರಲ್ಲಿಯೂ 9 ಮತ್ತು 10ನೇ ತರಗತಿ ಮಕ್ಕಳ ಬ್ಯಾಗ್ಗಳಲ್ಲಿ ಈ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಬೆಂಗಳೂರು ನಗರದ ಹಲವು ಶಾಲಾ ಮಕ್ಕಳ ಬ್ಯಾಗ್ಗಳಲ್ಲಿ ಕಾಂಡೋಮ್ ಹಾಗೂ ಗರ್ಭ ನಿರೋಧಕ ಮಾತ್ರೆಗಳು ಪತ್ತೆಯಾಗಿವೆಯಂತೆ. ಇದರ ಜೊತೆಗೆ ಸಿಗರೇಟ್, ಲೈಟರ್, ಫೆವಿಕಾಲ್ ಮುಂತಾದ ವಸ್ತುಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. 9 ಮತ್ತು 10ನೇ ತರಗತಿ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಬ್ಯಾಗ್ ಗಳಲ್ಲಿ ಕಾಂಡೋಮ್, ಗರ್ಭ ನಿರೋಧಕ ಮಾತ್ರೆ ಪತ್ತೆಯಾಗಿರುವ ಮಾಹಿತಿ ತಿಳಿದು ಬಂದಿದೆ. ಈ ಬಗ್ಗೆ ಎಚ್ಚರವಹಿಸುವಂತೆ ಶಾಲಾ ಆಡಳಿತ ಮಂಡಳಿ ಪೋಷಕರಿಗೆ ಮಕ್ಕಳು ಮನೆಗೆ ಬರುವ ಮತ್ತು ಹೊರಡು ವೇಳೆ ಹಾಗೂ ನಡವಳಿಕೆ ಬಗ್ಗೆ ಗಮನ ಹರಿಸುವಂತೆ ಸೂಚನೆ ನೀಡಿದೆ. ನಗರದ ಕೆಲವು ಶಾಲೆಗಳಲ್ಲಿ 10 ದಿನಗಳ ಕಾಲ ರಜೆ ಘೋಷಿಸಿ ಕೌನ್ಸಿಲಿಂಗ್ ನೀಡುವಂತೆ ಸಲಹೆ ನೀಡಲಾಗಿದೆ.