ನ್ಯೂಸ್ ನಾಟೌಟ್ : ಮದ್ಯದ ಅಮಲಿನಲ್ಲಿ ತೇಲಾಡುತ್ತಿದ್ದ ಎರಡು ವಿದ್ಯಾರ್ಥಿಗಳ ಗುಂಪು ಪರಸ್ಪರ ಬಡಿದಾಡಿಕೊಂಡ ಘಟನೆ ಉಡುಪಿಯ ಮಣಿಪಾಲ್‍ನ ಕಾಯಿನ್ ಸರ್ಕಲ್ ಬಳಿ ನಡೆದಿದೆ.ಬಾರ್ ಒಂದರ ಮುಂದೆ ಪರಸ್ಪರ ಬಡಿದಾಡಿಕೊಂಡು ದಾಂಧಲೆ ಎಬ್ಬಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ವಿದ್ಯಾರ್ಥಿಗಳ ಈ ರಂಪಾಟಕ್ಕೆ ಸಾರ್ವಜನಿಕರೇ ಶಾಕ್‌ಗೊಳಗಾಗಿದ್ದಾರೆ.
ಗಲಾಟೆಯ ತೀವ್ರತೆಗೆ ಓರ್ವ ವಿದ್ಯಾರ್ಥಿಯ ಬಟ್ಟೆ ಹರಿದು ಹೋಗಿದೆ. ಸ್ಥಳಕ್ಕೆ ಪೊಲೀಸರು ಬರುತ್ತಿದ್ದಂತೆ ಹೊಡೆದಾಡಿಕೊಳ್ಳುತ್ತಿದ್ದ ವಿದ್ಯಾರ್ಥಿಗಳು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.ವಿದ್ಯಾರ್ಥಿಗಳ ಹೊಡೆದಾಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಮಣಿಪಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.