ಕ್ರೈಂವೈರಲ್ ನ್ಯೂಸ್ಶಿಕ್ಷಣ

ವಿದ್ಯಾರ್ಥಿಗೆ ಕೈವಾರದಿಂದ 100ಕ್ಕೂ ಹೆಚ್ಚು ಬಾರಿ ಚುಚ್ಚಿದ್ದೇಗೆ ಸಹಪಾಠಿಗಳು..? ಅಷ್ಟಕ್ಕೂ 4ನೇ ತರಗತಿ ವಿದ್ಯಾರ್ಥಿ ಮಾಡಿದ್ದೇನು? ಪೋಷಕರು ಹೇಳಿದ್ದೇನು?

167

ನ್ಯೂಸ್ ನಾಟೌಟ್ : ಮೂವರು ಸಹಪಾಠಿಗಳು 4ನೇ ತರಗತಿಯ ವಿದ್ಯಾರ್ಥಿಗೆ(Student) ಕೈವಾರದಿಂದ 108 ಬಾರಿ ಚುಚ್ಚಿರುವ ಅಮಾನವೀಯ ಘಟನೆ ಮಧ್ಯಪ್ರದೇಶದ (Madhya Pradesh) ಇಂದೋರ್‌ನ ಖಾಸಗಿ ಶಾಲೆಯೊಂದರಲ್ಲಿ (School) ನಡೆದಿದೆ.

ನವೆಂಬರ್ 24ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಜಗಳ ಏರ್ಪಟ್ಟಿತ್ತು. ಈ ವೇಳೆ ಒಬ್ಬ ವಿದ್ಯಾರ್ಥಿಯ ಮೇಲೆ ಇತರ ಮೂವರು ಸಹಪಾಠಿಗಳು ಜ್ಯಾಮಿತಿ ಕಂಪಾಸ್‌ನಿಂದ (Geometry Compass) 108 ಬಾರಿ ಹಲ್ಲೆ ನಡೆಸಿರುವುದಾಗಿ ಮಕ್ಕಳ ಕಲ್ಯಾಣ ಸಮಿತಿ (CWC) ಅಧ್ಯಕ್ಷೆ ತಿಳಿಸಿದ್ದಾರೆ.

ನಡೆದ ಘಟನೆ ಬಳಿಕ ನನ್ನ ಮಗನಿಗೆ ಭೀತಿ ಉಂಟಾಗಿದೆ. ನನ್ನ ಮಗ ಮನೆಗೆ ಹಿಂದಿರುಗಿದಾಗ ನಡೆದ ಘಟನೆ ಬಗ್ಗೆ ವಿವರಿಸಿದ್ದಾನೆ. ಅವನ ಸಹಪಾಠಿಗಳು ಏಕೆ ಹಿಂಸಾತ್ಮಕವಾಗಿ ನಡೆಸಿಕೊಂಡರು ಎಂಬುದು ನನಗೆ ಇನ್ನೂ ತಿಳಿದುಬಂದಿಲ್ಲ. ಶಾಲೆಯ ಆಡಳಿತ ಮಂಡಳಿಯೂ ಕೂಡಾ ತರಗತಿಯ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡುತ್ತಿಲ್ಲ ಎಂದು ಸಂತ್ರಸ್ತ ಬಾಲಕನ ತಂದೆ ಹೇಳಿಕೆ ನೀಡಿದ್ದಾರೆ.

ಇಷ್ಟು ಚಿಕ್ಕ ವಯಸ್ಸಿನ ಮಕ್ಕಳು ಹಿಂಸಾತ್ಮಕ ವರ್ತನೆ ತೋರಿರುವುದರ ಹಿಂದಿನ ಕಾರಣವನ್ನು ಕಂಡುಹಿಡಿಯಲು ನಾವು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದ್ದೇವೆ ಎಂದು ಮಕ್ಕಳ ಕಲ್ಯಾಣ ಇಲಾಖೆ ಹೇಳಿದೆ.
ಘಟನೆಗೆ ಸಂಬಂಧಿಸಿದಂತೆ ಸಿಡಬ್ಲ್ಯುಸಿ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಲಹೆ ನೀಡಲಿದೆ. ಮಕ್ಕಳು ಹಿಂಸಾತ್ಮಕ ದೃಶ್ಯಗಳನ್ನು ಒಳಗೊಂಡಿರುವ ವೀಡಿಯೋ ಗೇಮ್‌ಗಳನ್ನು ಆಡುತ್ತಾರೆಯೇ ಎಂಬುದನ್ನು ಕಂಡುಹಿಡಿಯಲಾಗುತ್ತಿದೆ ಎಂದು ಮಕ್ಕಳ ಕಲ್ಯಾಣ ಇಲಾಖೆ ಅಧ್ಯಕ್ಷೆ ಹೇಳಿದ್ದಾರೆ.

ಘಟನೆಯ ಬಗ್ಗೆ ಏರೋಡ್ರೋಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ನೀಡಿದ ಬಳಿಕ ಗಾಯಗೊಂಡ ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಘಟನೆಯಲ್ಲಿ ಭಾಗಿಯಾದ ಎಲ್ಲಾ ಮಕ್ಕಳು ಕೂಡಾ 10 ವರ್ಷದೊಳಗಿನವರು ಎಂದು ವರದಿ ತಿಳಿಸಿದೆ.

See also  ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮುಖಂಡನಿಂದ ಅನ್ನಸಂತರ್ಪಣೆ, 40ಕ್ಕೂ ಹೆಚ್ಚು ಮಾಲಾಧಾರಿಗಳಿಗೆ ಹೋಳಿಗೆ ಊಟ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget