ಕರಾವಳಿಸುಳ್ಯ

ಸುಬ್ರಹ್ಮಣ್ಯ:ಭೀಕರ ರಸ್ತೆ ಅಪಘಾತ, ಮೃತರ ಸಂಖ್ಯೆ ನಾಲ್ಕಕ್ಕೇರಿಕೆ

223

ನ್ಯೂಸ್ ನಾಟೌಟ್:ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ಸಂಭವಿಸಿದೆ.ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ.ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಆಲ್ಟೋ ಕಾರಲ್ಲಿದ್ದ ಇಬ್ಬರು ಪುರುಷರು ಸೇರಿದಂತೆ ಮಹಿಳೆ ಮತ್ತು ಒಂದು ಮಗುವೊಂದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.ಮೃತರು ಬೇಲೂರು ಮೂಲದವರು ಎಂದು ತಿಳಿದಿದ್ದು, ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದರು ಎಂದು ಹೇಳಲಾಗಿದೆ. ತೂಫಾನ್ ವಾಹನವು ಹಾಸನ ಕಡೆಯದ್ದು ಎನ್ನಲಾಗಿದೆ. ಗಾಯಾಳುಗಳ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತಕ್ಕೆ ಅತಿ ವೇಗದ ಚಾಲನೆ ಕಾರಣವೆಂದು ಹೇಳಲಾಗುತ್ತಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಸುಳ್ಯದ ಹುಡುಗಿ ಝೀ ಕನ್ನಡ ರಿಯಾಲಿಟಿ ಶೋಗೆ ಆಯ್ಕೆ, ಯಾರಿವರು ಧ್ವನಿಮಾಯೆ ಕಲಾವಿದೆ..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget