ಭಕ್ತಿಭಾವ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಡೆಸ್ನಾನ ರದ್ದುಗೊಳಿಸಿದ ಜಿಲ್ಲಾಧಿಕಾರಿ

417
Spread the love

ಸುಳ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ  ಚಂಪಾಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳು ನಡೆಸುವ ಎಡೆಸ್ನಾನ ಸೇವೆಯನ್ನು ಕೋವಿಡ್ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ರದ್ದು ಮಾಡಿ ನಿರ್ದೇಶನ ನೀಡಿದ್ದಾರೆ.

ಚಂಪಾಷಷ್ಠಿ ಮಹೋತ್ಸವದ ಚೌತಿ, ಪಂಚಮಿ, ಷಷ್ಠಿ ದಿನಗಳಂದು ಶ್ರೀ ದೇವಳದ ಹೊರಾಂಗಣದಲ್ಲಿ ಭಕ್ತಾಧಿಗಳು ಸ್ವಯಂ ಆಗಿ ನಡೆಸುವ ಎಡೆಸ್ನಾನ ನಡೆಸಲು ಈ ಬಾರಿಯು ಅವಕಾಶ ನೀಡಲಾಗಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ವರ್ಷವೂ ಎಡೆಸ್ನಾನ ಸೇವೆಯನ್ನು ರದ್ದು ಮಾಡಲಾಗಿತ್ತು.  ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಕ್ರಮಕೈಗೊಳ್ಳಲಾಗಿದೆ.

See also  ಕುಕ್ಕೆ ಸುಬ್ರಹ್ಮಣ್ಯ; ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಾಭಾವಿ ಸಭೆ
  Ad Widget   Ad Widget   Ad Widget   Ad Widget   Ad Widget   Ad Widget