ನ್ಯೂಸ್ ನಾಟೌಟ್: ಇನ್ಫೋಸಿಸ್ (Infosys) ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ (Sudha Murty) ಹೆಸರನ್ನು ಬಳಸಿಕೊಂಡು ವಂಚನೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಸುಧಾಮೂರ್ತಿಯ ಪರ್ಸನಲ್ ಅಸಿಸ್ಟೆಂಟ್ ಮಮತ ಸಂಜಯ್ ಜಯನಗರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. ಶೃತಿ ಹಾಗೂ ಲಾವಣ್ಯ ಎಂಬವರ ವಿರುದ್ಧ ದೂರು ದಾಖಲಾಗಿದೆ.
ಕೆಕೆಎನ್‌ಸಿ ಎಂಬ ಸಂಘಟನೆಯಿಂದ (Kannada koota of northen California) 50ನೇ ವರ್ಷದ ಕಾರ್ಯಕ್ರಮಕ್ಕೆ ಸುಧಾಮೂರ್ತಿಯವರಿಗೆ ಆಹ್ವಾನಿಸಲಾಗಿತ್ತು. ಆದರೆ ಅವರು ಇಮೇಲ್ ಮೂಲಕ ಅಮೆರಿಕದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಬರಲು ಆಗುವುದಿಲ್ಲ ಎಂದು ಸಂದೇಶ ಕಳುಹಿಸಿದ್ದರು. ಈ ನಡುವೆ ಸುಧಾಮೂರ್ತಿಯವರ ಫೋಟೋಗಳನ್ನು ಬಳಸಿಕೊಂಡು ಜಾಹೀರಾತುಗಳನ್ನು ನೀಡಲಾಗಿತ್ತು. ಇದನ್ನು ಪ್ರಶ್ನಿಸಿದಾಗ ವಂಚನೆ ಬೆಳಕಿಗೆ ಬಂದಿದೆ.
ಮೂರ್ತಿ ಟ್ರಸ್ಟ್ ನ ಕಚೇರಿ ಹೆಸರು ಸೃಷ್ಠಿಸಿ ಸುಧಾಮೂರ್ತಿಯವರ ಅಸಿಸ್ಟೆಂಟ್ ಎಂದು ವಂಚಿಸಿರುವ ಆರೋಪ ಕೇಳಿ ಬಂದಿದ್ದು, ಆರೋಪಿ ಲಾವಣ್ಯ ಕಾರ್ಯಕ್ರಮಕ್ಕೆ ಸುಧಾಮೂರ್ತಿ ಮೇಡಂ ಬರುತ್ತಾರೆ ಎಂದು ಹೇಳಿ ವಂಚನೆ ಎಸಗಿದ್ದಾರೆ ಎನ್ನಲಾಗಿದೆ. ಹೀಗೆ ಅಮೆರಿಕದಲ್ಲಿ ನಡೆದ ಈ ಗ್ರೀಟ್ ವಿತ್ ಡಾ. ಸುಧಾಮೂರ್ತಿ ಕಾರ್ಯಕ್ರಮ ಆಯೋಜಿಸಿರುವುದಾಗಿ ಟಿಕೆಟ್ ಮಾರಾಟ ಮಾಡಿದ್ದಾರೆ. ಪ್ರತಿ ಟಿಕೆಟ್‌ಗೆ 40 ಡಾಲರ್ ಪಡೆದಿರುವುದಾಗಿ ಆರೋಪಿಸಲಾಗಿದೆ.
ಘಟನೆ ಸಂಬಂಧ ಸದ್ಯ ಜಯನಗರ ಠಾಣೆಯಲ್ಲಿ ಐಟಿ ಆಕ್ಟ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಸೆರೆ ಹಿಡಿಯುವ ಭರವಸೆ ನೀಡಿದ್ದಾರೆ.