Latestಕ್ರೈಂರಾಜ್ಯ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದೇನು..? ಬಂಧಿತರ ಭಾವಚಿತ್ರ ಬಿಡುಗಡೆ..!

2.4k

ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮೇಲೆ ತಲವಾರು ದಾಳಿ ನಡೆದಿದ್ದು, ಆತ ಅಧಿಕ ರಕ್ತಸ್ತ್ರಾವಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ, ಶಂಕಿತ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಪ್ರತಿಕ್ರಿಯೆ ನೀಡಿದ್ದಾರೆ.

ಬಂಧಿತ ಶಂಕಿತರ ಭಾವಚಿತ್ರ ಬಿಡುಗಡೆ ಮಾಡಿದ್ದು, ಹೆಸರು ಬಹಿರಂಗವಾಗಿದೆ. ಶಂಕಿತರನ್ನು ಅಬ್ದುಲ್ ಸಫ್ವಾನ್, ನಿಯಾಜ್,  ಮೊಹಮ್ಮದ್ ಮುಝಮಿಲ್, ಖಲಂದರ್ ಶಾಫಿ, ಆದಿಲ್ ಮೆಹರೂಫ್, ಮೊಹಮ್ಮದ್ ರಿಜ್ವಾನ್, ಕಳಸ ಮೂಲದ ರಂಜಿತ್ ಮತ್ತು ನಾಗರಾಜ್ ಎಂದು ಗುರುತಿಸಲಾಗಿದೆ.

ಬಂಧಿತರ ಮೇಲೆಯೂ ಈ ಹಿಂದಿನ ಹಲವು ಪ್ರಕರಣಗಳಿದ್ದು, ವಿಚಾರಣೆ ನಡೆಯುತ್ತಿದೆ ಎಂದಿದ್ದಾರೆ. ಸಾಮಾಜಿಕ ಜಾಲತಾಣಗಳ ಸುಳ್ಳು ಸುದ್ದಿಗಳ ಮೇಲೆ 15 ಪ್ರಕರಣಗಳು ದಾಖಲಾಗಿದ್ದು, ಆ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಬಜಪೆಯ ಕಿನಿಪದವು ಸಮೀಪ ಸುಹಾಸ ಶೆಟ್ಟಿ ಕಾರನ್ನು ಅಡ್ಡಗಟ್ಟಿ ಭೀಕರವಾಗಿ ಕೊಲೆಗೈದಿದ್ದ ಆರೋಪಿಗಳ ಭೀಕರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳ ಆಧಾರದ ಮೇಲೆ ತನಿಖೆ ಆರಂಭಿಸಿದ್ದ ಪೊಲೀಸರ ತಂಡ ಮಂಗಳೂರಿನಲ್ಲಿ ಅಡಗಿ ಕುಳಿತಿದ್ದ 8 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

See also  ಕ್ಷಮೆ ಕೇಳದ ಕಮಲ್ ಹಾಸನ್ ಗೆ ‘ಥಗ್ ಲೈಫ್’ ಚಿತ್ರ ಬ್ಯಾನ್ ಬಿಸಿ..!ಚಿತ್ರ ಪ್ರದರ್ಶನ ಮಾಡದಂತೆ ಥಿಯೇಟರ್‌ಗಳಿಗೆ ಎಚ್ಚರಿಕೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget