ನ್ಯೂಸ್ ನಾಟೌಟ್: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರಿನಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಕರಣದಲ್ಲಿ ಕಳಸ ಮೂಲದ ಇಬ್ಬರು ಆರೋಪಿಗಳು ಸಹ ಭಾಗಿಯಾಗಿದ್ದು, ಪೊಲೀಸರು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಚಿಕ್ಕಮಗಳೂರು ಮಂಗಳೂರು ಗಡಿಯಲ್ಲಿ ಭಾರೀ ಭದ್ರತೆ ಕೈಗೊಂಡಿದ್ದಾರೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಪೊಲೀಸರು ಚೆಕ್ ಪೋಸ್ಟ್ ನಲ್ಲಿ ಪ್ರತಿ ವಾಹನವನ್ನೂ ತಪಾಸಣೆ ಮಾಡಿ ಬಿಡುತ್ತಿದ್ದಾರೆ. ಕೊಟ್ಟಿಗೆಹಾರ-ಚಾರ್ಮಾಡಿ ಘಾಟಿಯಲ್ಲಿ ಗಸ್ತು ಹೆಚ್ಚಿಸಲಾಗಿದೆ. ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುವ ಪ್ರತಿಯೊಂದು ವಾಹನದ ಮೇಲೂ ತೀವ್ರ ನಿಗಾ ಇಡಲಾಗಿದೆ.
ಬಜ್ಪೆಯ ಕಿನ್ನಿಪದವು ಬಳಿ ಗುರುವಾರ(ಮೇ.1) ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯಲ್ಲಿ ಫಾಝಿಲ್ ನ ಸಹೋದರ ಆದಿಲ್ ಮೆಹರೂಫ್ ನೆ ಪ್ರಮುಖ ಆರೋಪಿ ಎಂದು ತಿಳಿದು ಬಂದಿದೆ.
ಸುಹಾಸ್ ಹತ್ಯೆಗೆ 5 ಲಕ್ಷ ರೂ. ನೀಡೋದಾಗಿ ಫಾಜಿಲ್ ನ ತಮ್ಮ ಆದಿಲ್ ಸಫ್ವಾನ್ ತಂಡಕ್ಕೆ ಹೇಳಿರುತ್ತಾನೆ. ಅದರಲ್ಲಿ 3 ಲಕ್ಷ ರೂ. ಅಡ್ವಾನ್ಸ್ ನೀಡಿರುತ್ತಾನೆ. ಬಳಿಕ ಒಂದು ತಂಡವನ್ನು ಹತ್ಯೆಗಾಗಿ ಸಫ್ವಾನ್ ರೆಡಿ ಮಾಡ್ತಾನೆ. ನಿಯಾಜ್‌ನ ಇಬ್ಬರು ಸ್ನೇಹಿತರು ನಾಗಾರಾಜ್ ಮತ್ತು ರಂಜಿತ್ ನನ್ನು ಸಂಪರ್ಕಿಸಿ, ಇಬ್ಬರು ಸಫ್ವಾನ್ ಮನೆಯಲ್ಲಿ ಎರಡು ದಿನಗಳ ಕಾಲ ಇದ್ದು, ಮೇ 1 ರಂದು ಸುಹಾಸ್ ಚಲನವಲನಗಳನ್ನು ಗಮನಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾದವರನ್ನು ಅಬ್ದುಲ್ ಸಫ್ವಾನ್, ನಿಯಾಝ್, ಮಹಮ್ಮದ್ ಮುಸಮ್ಮೀರ್, ಕಲಂದರ್ ಶಾಫಿ, ಆದಿಲ್ ಮೆಹರೂಫ್, ರಂಜಿತ್, ಮಹಮ್ಮದ್ ರಿಝ್ವಾನ್ ಹಾಗೂ ನಾಗರಾಜ್ ಎಂದು ಗುರುತಿಸಲಾಗಿದೆ. ಹತ್ಯೆಯಲ್ಲಿ 10 ಜನ ಭಾಗಿಯಾಗಿದ್ದಾರೆ, ಇನ್ನೂ ಇಬ್ಬರ ಬಂಧನ ಬಾಕಿ ಇದೆ.
ಭಾರತೀಯ ಸೇನೆಯಲ್ಲಿ ಅಧಿಕಾರಿ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳಿಲ್ಲದೆ ಆಯ್ಕೆ, 30 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ವಿಜಯ್ ರಾಜಕೀಯದ ಬಗ್ಗೆ ಖ್ಯಾತ ನಟ ಅಜಿತ್ ಕುಮಾರ್ ಹೇಳಿಕೆ..! ರಾಜಕೀಯ ಎಂಟ್ರಿ ಬಗ್ಗೆ ಸುಳಿವು..?