ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ರಾಜಕೀಯ ಕೋಲಾಹಲ ಎಬ್ಬಿಸಿದೆ. ಸುಹಾಶ್ ಶೆಟ್ಟಿ ಇದ್ದ ಕಾರ್‌ಗೆ ಗೂಡ್ಸ್ ವಾಹನ ಗುದ್ದಿಸಿದ್ದಲ್ಲದೇ ಬಳಿಕ ಐದಾರು ಜನರ ತಂಡ ನಡುರಸ್ತೆಯಲ್ಲೇ ತಲ್ವಾರ್ ಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ಇದಾದ ಬಳಿಕ ಸ್ವಲ್ಪದೂರದಲ್ಲೇ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಪತ್ತೆಯಾಗಿತ್ತು.
ಹೀಗಾಗಿ ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಶಂಕಿತ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.ಸುಹಾಸ್ ಶೆಟ್ಟಿ ಕೊಲೆ ಕೇಸ್ ಸಂಬಂಧ ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು,ಎಲ್ಲಾ ಶಂಕಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಮಂಗಳೂರಿನಲ್ಲೇ ಅವಿತ್ತಿದ್ದರು ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆಪಡೆಯಲಾಗಿದೆ.