ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 7 ಮಂದಿಯ ಹೆಸರು ಬಹಿರಂಗವಾಗಿದೆ ಎಂದು ಹೇಳಲಾಗುತ್ತಿದೆ.
ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವರು ಎಂದು ಎನ್ನಲಾಗುತ್ತಿದೆ. ಮಂಗಳೂರಿನ ನಟೋರಿಯಸ್ ಸಫ್ವಾನ್ ಗ್ಯಾಂಗ್ ಗೆ ಕೆಲಸ ಮಾಡಲು ಸಾಥ್ ನೀಡುತ್ತಿದ್ದರು ಎನ್ನಲಾಗಿದೆ. ಅರೆಸ್ಟ್ ಆದ ಶಂಕಿತರನ್ನು ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್, ಖಲಂದರ್ ಶಾಫಿ, ಮೊಹಮ್ಮದ್ ರಿಜ್ವಾನ್, ಕಳಸ ಮೂಲದ ರಂಜಿತ್ ಮತ್ತು ನಾಗರಾಜ್ ಎಂದು ಹೇಳಲಾಗುತ್ತಿದೆ.
ಪರಮೇಶ್ವರ್ ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಮತ್ತು ಉಡುಪಿಗೆ ಪ್ರತ್ಯೇಕ ಪೊಲೀಸ್ ಟಾಸ್ಕ್ ಫೋರ್ಸ್ ಸ್ಥಾಪನೆ ಮಾಡಿ ಕೋಮು-ಗಲಬೆ ನಡೆಯುವುದನ್ನು ತಡೆಯುತ್ತೇವೆ ಎಂದಿದ್ದಾರೆ. ಸೋಷಿಯಲ್ ಮಿಡಿಯಾದ ಮೇಲೆಯೂ ಹೆಚ್ಚಿನ ನಿಗಾ ಇಡಲಾಗುತ್ತದೆ. ಬಂಧನವಾದ ಆರೋಪಿಗಳ ಬಗ್ಗೆ ತನಿಖೆ ಆದ ಬಳಿಕ ತಿಳಿಯುತ್ತದೆ ಎಂದಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿಗೆ ಒಳ್ಳೆಯ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಖ್ಯಾತಿ ಇತ್ತು, ಈಗ ಮತ್ತೆ ಶಾಂತಿ ಸ್ಥಾಪನೆ ಮಾಡಿ ಮತ್ತೆ ಜನರು ಈ ಜಿಲ್ಲೆಗೆ ಬರುವಂತೆ ಮಾಡುತ್ತೇವೆ ಎಂದಿದ್ದಾರೆ.
ಬಜಪೆಯ ಕಿನಿಪದವು ಸಮೀಪ ಸುಹಾಸ ಶೆಟ್ಟಿ ಕಾರನ್ನು ಅಡ್ಡಗಟ್ಟಿ ಭೀಕರವಾಗಿ ಕೊಲೆಗೈದಿದ್ದ ಆರೋಪಿಗಳ ಭೀಕರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳ ಆಧಾರದ ಮೇಲೆ ತನಿಖೆ ಆರಂಭಿಸಿದ್ದ ಪೊಲೀಸರ ತಂಡ ಮಂಗಳೂರಿನಲ್ಲಿ ಅಡಗಿ ಕುಳಿತಿದ್ದ 8 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.