Latest

ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ಕಳಸದ ರೆಸಾರ್ಟ್‌ವೊಂದರಲ್ಲಿ ಭರ್ಜರಿ ಪಾರ್ಟಿ ಮಾಡಿರುವ ಆರೋಪಿಗಳು?!ಹತ್ಯೆಗೆ ಸ್ಕೆಚ್ ರೂಪಿಸಲೆಂದೇ ಪಾರ್ಟಿ ಮಾಡಿದರೇ?

943

ನ್ಯೂಸ್‌ ನಾಟೌಟ್: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧ ಪಟ್ಟ ಹಾಗೆ ಬಗೆದಷ್ಟು ಸ್ಪೋಟಕ ವಿಚಾರಗಳು ಬಯಲಿಗೆ ಬರುತ್ತಿವೆ. ಸುಹಾಸ್ ಕೊಲೆಗೂ ಮುನ್ನ ಆರೋಪಿಗಳು ಭರ್ಜರಿ ಪಾರ್ಟಿ ಮಾಡಿದ್ದ ಫೋಟೋ ಈಗ ಲಭ್ಯವಾಗಿದ್ದು, ಚಿಕ್ಕಮಗಳೂರಿನ ಕಳಸದ ರೆಸಾರ್ಟ್ ಒಂದರಲ್ಲಿ ಏ.2 ರಂದು ಆರೋಪಿಗಳು ನೈಟ್‌ ಪಾರ್ಟಿ ಮಾಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಈ ಪಾರ್ಟಿಯಲ್ಲೇ ಹತ್ಯೆಗೆ ಸ್ಕೆಚ್ ರೂಪಿಸಲಾಗಿದೆ ಎಂಬ ಅನುಮಾನ ದಟ್ಟವಾಗಿದೆ.

ಕ್ಯಾಂಪ್ ಫೈರ್ ಹಾಕಿ ಸುಹಾಸ್ ಶೆಟ್ಟಿ ಹತ್ಯೆಯ ಆರೋಪಿಗಳಾದ ಮುಝಮ್ಮಿಲ್, ನಿಯಾಜ್ ಹಾಗೂ ಚಿಕ್ಕಮಗಳೂರು ಮೂಲದ ರಂಜಿತ್ ಪಾರ್ಟಿ ಮಾಡಿದ್ದಾರೆ. ಈ ಮೂವರ ಜೊತೆ ಇನ್ನೂ ಐದು ಜನ ಅಪರಿಚಿತರು ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದ್ದು,ಈ ಪಾರ್ಟಿಯಲ್ಲಿ ರಂಜಿತ್ ನನ್ನು ಮುಝಮ್ಮಿಲ್ ಗೆ ನಿಯಾಜ್ ಪರಿಚಯ ಮಾಡಿಕೊಟ್ಟಿದ್ದ. ಈ ಪಾರ್ಟಿಯಲ್ಲೇ ಸುಹಾಸ್ ಹತ್ಯೆ ಬಗ್ಗೆ ಮಾತುಕತೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಇನ್ನು ಫಾಝಿಲ್ ಸಹೋದರನಾಗಿರುವ ಆದಿಲ್ ಸುಹಾಸ್ ಶೆಟ್ಟಿ ಹತ್ಯೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದು, ಈ ಹಣದ ಪೈಕಿ 3 ಲಕ್ಷ ರೂ.ಹಣವನ್ನು ಮುಂಗಡವಾಗಿ ಪಾವತಿಸಲಾಗಿತ್ತು. ಈ ಹಣದಲ್ಲೇ ಪಾರ್ಟಿ ಮಾಡಿದ್ದಾರೆನ್ನುವ ಶಂಕೆ ಕೂಡ ವ್ಯಕ್ತವಾಗಿದೆ.

ಮುಝಮ್ಮಿಲ್ ಯಾರು?

ಮೊಹಮ್ಮದ್ ಮುಝಮ್ಮಿಲ್ ಮಂಗಳೂರಿನವನಾಗಿದ್ದು, 4 ತಿಂಗಳ ಹಿಂದೆ ಸೌದಿ ಅರೇಬಿಯಾದಿಂದ ಬಂದಿದ್ದ ಎನ್ನಲಾಗಿದೆ. ಈತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.ಇನ್ನು ನಿಯಾಜ್ ಮೇಸ್ತ್ರಿ ಕೆಲಸ ಮಾಡುತ್ತಿದ್ದು, ಬಜ್ಪೆ ಶಾಂತಿಗುಡ್ಡೆ ಮಸೀದಿ ಬಳಿ ನೆಲೆಸಿದ್ದ. ಕಳಸ ತಾಲೂಕಿನ ರುದ್ರ ಪಾದದ ರಂಜಿತ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಸುಹಾಸ್ ಮೇಲೆ ದಾಳಿ ಮಾಡಲು ಈತನೇ ಲಾಂಗ್ ತಂದುಕೊಟ್ಟ ಆರೋಪವೂ ಕೇಳಿ ಬಂದಿದೆ.

See also  ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಅಂಗದಾನ ದಿನಾಚರಣೆ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget