ಮಂಗಳೂರು : ಎಸ್‌ಎಸ್ ಎಲ್‌ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಂಕನಾಡಿ ಬಳಿಯ ಜೆಪ್ಪು ಕುಡುಪಾಡಿಯಿಂದ ವರದಿಯಾಗಿದೆ. ಅನಿಶ್ ಪಿ. ಪಾಯಲ್ (16) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ದಿ.ಪ್ರಶಾಂತ್ ಪಾಯಲ್ ಎಂಬವರ ಪುತ್ರ ಅನಿಶ್ ವೈಯಕ್ತಿಕ ಕಾರಣಗಳಿಂದ ಮನನೊಂದು ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಶಾಂತ್ ಪಾಯಲ್ ಮೂರು ವರ್ಷಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು, ಆ ಬಳಿಕ ಅನೀಶ್ ಮಾನಸಿಕವಾಗಿ ನೊಂದಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.