ಕ್ರೈಂ

ಬ್ಯೂಟಿ ಪಾರ್ಲರ್ ಹುಡುಗಿ ನೇಣಿಗೆ ಶರಣು, ಆತ್ಮಹತ್ಯೆ ಕಾರಣ ನಿಗೂಢ

752

ಮಂಗಳೂರು: ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ನಡೆದಿದೆ. ಆಕಾಶಭವನದ ಕಾಪಿಗುಡ್ಡೆ ನಿವಾಸಿ ಶಿಫಾಲಿ (22) ಮೃತ ಯುವತಿ. ಆಕಾಶಭವನದಲ್ಲಿ ಬ್ಯೂಟೀಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಯುವತಿ ಎಂದಿನಂತೆ ಮನೆಗೆ ಮರಳಿದ್ದಳು. ಬಳಿಕ ಕೋಣೆಗೆ ತೆರಳಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯವರು ನೋಡುವಷ್ಟರಲ್ಲಿ ಆಕೆ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಬ್ಯಾಂಕ್..! ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅರೆಸ್ಟ್..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget