ಕರಾವಳಿ

ಕೆರೆಗೆ ಹಾರಿ ಯುವಕ ಆತ್ಮಹತ್ಯೆ

542

ನ್ಯೂಸ್ ನಾಟೌಟ್ : ಕೆರೆಗೆ ಹಾರಿ ಯುವಕನೋ ರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 13ರಂದು ಸಂಜೆ ಮುರುಳ್ಯ ಗ್ರಾಮದ ಅಲೇಕಿ ಎಂಬಲ್ಲಿ ನಡೆದಿದೆ.

ಮುರುಳ್ಯ ಗ್ರಾಮದ ಅಲೇಕಿ ಚೆನ್ನಪ್ಪ ಗೌಡರ ಪುತ್ರ ರವಿಚಂದ್ರ (40 ವರ್ಷ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ರವಿಚಂದ್ರರು ಪತ್ನಿ ಹಾಗೂ ಮಗುವಿನೊಂ ದಿಗೆ ಪುತ್ತೂರಿನ್ಲಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಸೆ. 13 ರಂದು ಅಲೇಕಿಯ ತನ್ನ ಮನೆಗೆ ಬಂದಿದ್ದರು. ಮನೆಯಲ್ಲಿ ತಾಯಿ ಒಬ್ಬರೇ ಇರುವ ಸಂದರ್ಭದಲ್ಲಿ ಮೈಲುತುತ್ತು ಬ್ಯಾಗನ್ನು ಹಿಡಿದುಕೊಂಡು ರೋಗ ಇರುವ ಅಡಿಕೆ ಮರದ ಬುಡಕ್ಕೆ ಮೈಲುತುತ್ತನ್ನು ಪುಡಿ ಮಾಡಿ ಹಾಕುವುದಾಗಿ ಹೇಳಿ ಸಂಜೆ ಸುಮಾರು 4 ಗಂಟೆಯ ಅಂದಾಜಿಗೆ ತೋಟಕ್ಕೆ ಹೋ ಗಿದ್ದರು. ಸಂಜೆ 6 ಗಂಟೆಯಾದರೂ ಮಗ ಹಿಂತಿರುಗದಿದ್ದುದರಿಂದ ತಾಯಿ ಮಗನನ್ನು ಹುಡುಕಿಕೊಂಡು ತೋಟಕ್ಕೆ ಹೋ ಗುವಾಗ ತೋಟದ ಕೆರೆಯ ಬದಿಯಲ್ಲಿ ಚಪ್ಪಲಿ, ಮದ್ಯದ ಬಾಟಲ್ ಹಾಗೂ ಮೈಲುತುತ್ತುಕವರ್ ಇದ್ದುದನ್ನು ಗಮನಿಸಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂತು. ಮೃತರು ಪತ್ನಿ ಮಂಜುಳಾ, ತಂದೆ, ತಾಯಿ, ಓರ್ವ ಪುತ್ರ, ಇಬ್ಬರು ಸಹೋ ದರರು, ಇಬ್ಬರು ಸಹೋ ದರಿಯರನ್ನು ಅಗಲಿದ್ದಾರೆ.

See also  ಪುತ್ತೂರಿನ ವೇಟ್‌ಲಿಫ್ಟರ್ ಹೃದಯಾಘಾತಕ್ಕೆ ಬಲಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget