ಕರಾವಳಿಸುಳ್ಯ

ಸುಳ್ಯ: KVG ಆಯುರ್ವೇದ ಹಾಗೂ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ 76ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

ನ್ಯೂಸ್ ನಾಟೌಟ್ : ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 76ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ. ವಿ. ಚಿದಾನಂದರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸಾರಿದರು.

ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ. ಸಿ., ಕಾರ್ಯದರ್ಶಿ ಡಾ. ಐಶ್ವರ್ಯ ಕೆ. ಸಿ., ಕೌನ್ಸಿಲ್ ಮೆಂಬರ್ ಶ್ರೀ. ಜಗದೀಶ್ ಅಡ್ತಲೆ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಪ್ರಾಂಶುಪಾಲ ಡಾ.ಲೀಲಾಧರ್ ಡಿ. ವಿ.,ಸಂಸ್ಥೆಯ ಎನ್.ಎಸ್.ಎಸ್ ಯೋಜನಾಧಿಕಾರಿ ಡಾ.ಪ್ರಮೋದ್ ಪಿ. ಎ. ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.

Related posts

ಬಸ್‌ನಲ್ಲಿ ಪ್ರಯಾಣಿಸೋ ವೇಳೆ ಯುವಕನಿಂದ ಮಹಿಳೆಗೆ ಅನುಚಿತ ವರ್ತನೆ, ಕೆಲವೇ ಗಂಟೆಯಲ್ಲಿ ಪೊಲೀಸರ ಅತಿಥಿಯಾದ ಯುವಕ..ಆತ ಸಿಕ್ಕಿಬಿದ್ದಿದ್ದೇಗೆ ?

ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದ ಯುವಕನ ಶವ ಪತ್ತೆಗೆ ಮುಂದಾದ ಉಡುಪಿಯ ಸಾಹಸಿ..! ಆಪತ್ಬಾಂಧವನಿಗೂ ಎದುರಾಯ್ತಾ ಅಪಾಯ? ಅಷ್ಟಕ್ಕೂ ಅಲ್ಲಿ ನಡೆದದ್ದೇನು?

ಹೋಟೆಲ್ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ಮೃತದೇಹ ಪತ್ತೆ..!ಮಲಯಾಳಂನ ಖ್ಯಾತ ನಟನಿಗೆ ಆಗಿದ್ದೇನು?