ನ್ಯೂಸ್ ನಾಟೌಟ್ : ಸುಳ್ಯದ ಜ್ಯೋತಿ ಸರ್ಕಲ್ ಬಳಿ ಬೈಕ್ ಹಾಗು ಕಾರಿನ ನಡುವೆ ಇಂದು ಮಧ್ಯಾಹ್ನ(ಸೆ.೮) ಅಪಘಾತ ನಡೆದಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ.
ಶಿಫ್ಟ್ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಬೈಕ್ ನಲ್ಲಿದ್ದವರು ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದ್ದು, ಅದರಲ್ಲಿದ್ದ ಓರ್ವನ ಕಾಲಿಗೆ ಗಂಭೀರ ಪೆಟ್ಟು ಬಿದ್ದಿದೆ.
ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸ್ಥಳೀಯರ ಸಹಾಯದಿಂದ ಸಾಗಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...