ನ್ಯೂಸ್ ನಾಟೌಟ್: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ನಾಲ್ಕು ಲಾರಿಗಳನ್ನು ಸುಳ್ಯ ಸಮೀಪದ ಜಾಲ್ಸೂರಿನ ಅಡ್ಕಾರು ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆ.24ರಂದು ನಾಲ್ಕು ಲಾರಿಗಳಲ್ಲಿ ಮುರೂರು ಕಡೆಯಿಂದ ಸುಳ್ಯ ಮಾರ್ಗವಾಗಿ ಮಡಿಕೇರಿಗೆ ಕಲ್ಲು ಸಾಗಿಸುತ್ತಿದ್ದಾಗ ಸುಳ್ಯ ಪೊಲೀಸರು ದಾಳಿ ನಡೆಸಿದ್ದಾರೆ. ಅನುಮತಿ ಇಲ್ಲದೆ ಕಲ್ಲು ಸಾಗಾಟ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ 4 ಲಾರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.