ಶಿಕ್ಷಣಸುಳ್ಯ

ಸುಳ್ಯ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ‘ಆಕರ್ಷಣ್ 2023’ , PUC ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ

210

ನ್ಯೂಸ್ ನಾಟೌಟ್: ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ‘ಆಕರ್ಷಣ್ 2023’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ಡಿ. 2 ರಂದು ಕಾಲೇಜಿನ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಪ್ರಾಂಶುಪಾಲ ಚಂದ್ರಶೇಖರ ಕಾಂತಮಂಗಲ ನೆರವೇರಿಸಿದರು. ಬಳಿಕ ಮಾತನಾಡಿದ ಅವರು “ವಿದ್ಯಾರ್ಥಿಗಳ ಮುಂದೆ ಗುರಿ ಇರಬೇಕು ,ಹಿಂದೆ ಗುರುಗಳ ಹಾಗೂ ತಂದೆ-ತಾಯಿಯ ಆಶೀರ್ವಾದವಿರಬೇಕು. ಆಗ ಮಾತ್ರ ನಮ್ಮ ಪ್ರಯತ್ನಕ್ಕೆ ಜಯವಿರುತ್ತದೆ.

ಸರಕಾರಿ ಕೆಲಸಕ್ಕೆ ಸೇರುವವರ ಸಂಖ್ಯೆ ನಮ್ಮಲ್ಲಿ ವಿರಳ. ಸದಾ ನಾವು ಪ್ರಯತ್ನಶೀಲರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸತೀಶ್ ಕುಮಾರ್ ಕೆ.ಆರ್ ವಹಿಸಿದ್ದರು.

ಈ ವೇಳೆ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಲತಾ, ಐಕ್ಯೂಎ.ಸಿ ಸಂಚಾಲಕಿ ಡಾ. ಜಯಶ್ರೀ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಉದಯಶಂಕರ್ ಹೆಚ್, ವಿದ್ಯಾರ್ಥಿ ಪ್ರತಿನಿಧಿ ಸೌಂದರ್ಯ ಉಡುಪ, ತೇಜಸ್ವಿನಿ ,ವಿಜೇತ್ ,ಶ್ರೀಪ್ರಸಾದ್, ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ. ಜಯಶ್ರೀ ಸ್ವಾಗತಿಸಿ, ಉದಯಶಂಕರ್ ಹೆಚ್. ವಂದಿಸಿ, ಪ್ರತೀಕ್ಷಾ ನಿರೂಪಿಸಿದರು.

See also  ಸುಳ್ಯ: ರಬ್ಬರ್ ನೆಲಹಾಸು ವಿತರಣೆ,ಉಚಿತ ರೇಬಿಸ್ ಲಸಿಕೆ ಕಾರ್ಯಕ್ರಮ;ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಉದ್ಘಾಟನೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget