ನ್ಯೂಸ್ ನಾಟೌಟ್: ಅಕ್ರಮ ಮದ್ಯ ಮಾರಾಟ ಹಾಗೂ ಸೇವನೆ ಪ್ರಕರಣದಲ್ಲಿ ದೂರು ದಾಖಲಾಗಿದೆ.
ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ಮದ್ಯ ಮಾರಾಟ ಹಾಗೂ ಸೇವಿಸುತ್ತಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಜರುಗಿಸಿದ್ದಾರೆ.
ಸುಳ್ಯ ಪೊಲೀಸರು ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ನಲ್ಲಿರುವ ಸಂದರ್ಭದಲ್ಲಿ ಅರಂತೋಡು ಗ್ರಾಮದ ಕೊಡಂಕೀರಿ ಎಂಬಲ್ಲಿರುವ ಗೂಡಂಗಡಿ ಎದುರಲ್ಲಿ ಸಂಜೆ ವ್ಯಕ್ತಿಯೊಬ್ಬ ಕುಳಿತುಕೊಂಡು ಮದ್ಯ ಸೇವಿಸುತ್ತಿದ್ದ. ಇದನ್ನು ಗಮನಿಸಿ ಪೊಲೀಸರು ಜೀಪು ನಿಲ್ಲಿಸಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮೈಸೂರ್ ಲ್ಯಾನ್ಸರ್ ಕಂಪನಿಯ ಟೆಟ್ರಾ ಪ್ಯಾಕೇಟ್ ಮದ್ಯ ಹಾಗೂ ಬದಿಯಲ್ಲಿದ್ದ ನೀರಿನ ಬಾಟಲಿಯನ್ನು ಪ್ಲಾಸ್ಟಿಕ್ ಲೋಟಕ್ಕೆ ಹಾಕಿಕೊಂಡು ಮದ್ಯ ಸೇವನೆ ಮಾಡುತ್ತಿದ್ದದ್ದು ಕಂಡು ಬಂದಿದೆ.
ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಸುಬ್ಬಣ್ಣ ಅನ್ನುವ ವ್ಯಕ್ತಿಯ ವಿರುದ್ಧ ಅಬಕಾರಿ ಕಾಯಿದೆಯ ಪ್ರಕಾರ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.