ಸುಳ್ಯ

ಸುಳ್ಯ: ಸಹಾಯಕ ಕೃಷಿ ನಿರ್ದೇಶಕ ನಾಗರಾಜ್ ವರ್ಗಾವಣೆ, ಕೃಷಿ ಇಲಾಖೆ ವತಿಯಿಂದ ಬೀಳ್ಕೊಡುಗೆ

272

ನ್ಯೂಸ್ ನಾಟೌಟ್: ಸುಳ್ಯದಲ್ಲಿ ಕಳೆದೊಂದು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಕೃಷಿ ಅಧಿಕಾರಿ ಹಾಗೂ ಪ್ರಭಾರ ಸಹಾಯಕ ಕೃಷಿ ನಿರ್ದೇಶಕ ನಾಗರಾಜ್ ವರ್ಗಾವಣೆಗೊಂಡಿದ್ದಾರೆ.

ಹಾವೇರಿಯ ಕಾಗಿನೆಲೆ ರೈತ ಸಂಪರ್ಕ ಕೇಂದ್ರಕ್ಕೆ ವರ್ಗಾವಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಸುಳ್ಯದ ಕೃಷಿ ಇಲಾಖೆಗೆ ಇಂಚಾರ್ಜ್ ಆಗಿ ಎಸ್ ಎಸ್ ಮಂಜುನಾಥ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ನಾಗರಾಜ್ ಬನ್ನಿ ಹಟ್ಟಿ ರವರಿಗೆ ಸುಳ್ಯ ಕೃಷಿ ಇಲಾಖೆ ಬೀಳ್ಕೋಡುಗೆ ಕಾರ್ಯಕ್ರಮ ನಡೆಯಿತು.

ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ , ಉಪ ಕೃಷಿ ನಿರ್ದೇಶಕ ಶಿವಶಂಕರ್ , ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕ ರಮೇಶ್ , ಕಚೇರಿ ಅಧೀಕ್ಷಕಿ ಗೀತಾ, ದ್ವಿತೀಯ ದರ್ಜೆ ಸಹಾಯಕಿ ವನ ಮಾಲ, ನಿವೃತ್ತ ಕೃಷಿ ಅಧಿಕಾರಿ ಮೋಹನ್ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

See also  ಸುಳ್ಯ: ಸಂಭ್ರಮದ ಗಣೇಶೋತ್ಸವಕ್ಕೆ ದಿನಗಣನೆ, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget