ಕರಾವಳಿರಾಜಕೀಯಸುಳ್ಯ

ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಪ್ರತಿಭಟನೆ:ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿ‍ಷೇಧ ಭರವಸೆಗೆ ಆಕ್ರೋಶ

371

ನ್ಯೂಸ್ ನಾಟೌಟ್ :ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​​ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.ಇದರಲ್ಲಿ ಬಜರಂಗಳ ಬ್ಯಾನ್ ಭರವಸೆ ಕೂಡ ಒಂದು.ಇದಕ್ಕೆ ಸಂಬಂಧಿಸಿದಂತೆ ಬಿಜೆಪಿಗರು ಕೆಂಡಾಮಂಡಲರಾದರೆ ಕೆಲ ಹಿಂದೂ ಮುಖಂಡರು ಕೂಡ ಇದನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಭಜರಂಗದಳ ನಿಷೇಧದ ಕಾಂಗ್ರೆಸ್ ಪ್ರಣಾಳಿಕೆಯ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.ಈ ವೇಳೆ ಬಜರಂಗದಳ ಪ್ರಮುಖರು,ಕಾರ್ಯಕರ್ತರು ಭಾಗಿಯಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿ‍ಷೇಧ ಭರವಸೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

See also  ಮಂಗಳೂರು: ‘ಬಜಪೆ ಚಲೋ’ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿಎಚ್‌ ಪಿ, ಬಜರಂಗ ದಳ ನಾಯಕರ ವಿರುದ್ಧ ಎಫ್‌.ಐ.ಆರ್..! ಈ ಬಗ್ಗೆ ಪೊಲೀಸ್ ಕಮಿಷನರ್‌ ಹೇಳಿದ್ದೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget