ಕರಾವಳಿ

ಸುಳ್ಯ: ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿಟ್ಟವ ಪಶ್ಚಿಮ ಬಂಗಾಳದಲ್ಲಿ ಸೆರೆ?

ನ್ಯೂಸ್‌ ನಾಟೌಟ್: ಸುಳ್ಯದ ಬೀರಮಂಗಲದಲ್ಲಿ ಯುವತಿಯ ಮೃತದೇಹ ಗೋಣಿಚೀಲದಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ನವೆಂಬರ್ ೨೨ರಂದು ಬೀರಮಂಗಲದ ಬಾಡಿಗೆ ಮನೆಯೊಂದರಲ್ಲಿ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ  ತುಂಬಿಸಿ ಪರಾರಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚುರುಕಿನ ತನಿಖೆ ನಡೆಸಿ ಆತನನ್ನು ಬಂಧಿಸಿ ಇದೀಗ ಸುಳ್ಯದತ್ತ ಕರೆದುಕೊಂಡು ಬರುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಇಮ್ರಾನ್ ಕಳೆದ ಆರು ತಿಂಗಳಿನಿಂದ ಬೀರ ಮಂಗಲದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಎರಡು ದಿನಗಳ ಹಿಂದೆ ಹೋಟೆಲ್‌ನಲ್ಲಿ ಊರಿಗೆ ತೆರಳುತ್ತೇನೆ ಎಂದು ಹೇಳಿ ಹೊರಟಿದ್ದ. ಆದರೆ ಆತ ಪತ್ನಿಯನ್ನು ಕರೆದುಕೊಂಡು ಹೋಗದೆ ಒಬ್ಬನೇ ಹೋಗಿರುವುದು ಅನುಮಾನಗೊಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ.

Related posts

ಸುಳ್ಯ: 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ, ತಡರಾತ್ರಿ ಮನೆಗೆ ನುಗ್ಗಿದ ಯುವಕ

ಗಂಡನನ್ನು ಕೊಂದು 22 ಪೀಸ್ ಮಾಡಿ ಫ್ರಿಡ್ಜ್ ನಲ್ಲಿಟ್ಟ ಹೆಂಡತಿ, ಮಗ

ಎರಡು ಸುತ್ತು ಮುಗಿದಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರಿಗೆ ಎಷ್ಟು ಮುನ್ನಡೆ?