ನ್ಯೂಸ್ ನಾಟೌಟ್: ಲೋಕಸಭಾ ಚುನಾವಣೆಗೆ ದಿನಗಣನೆ ನಡೆಯುತ್ತಿದ್ದಂತೆ ಬಿಜೆಪಿ ಜೊತೆ ಜೆಡಿಎಸ್ ಸಂಖ್ಯ ನಡೆಸಿದೆ. ದೊಡ್ಡ ಗೌಡ್ರ ಈ ನಿರ್ಧಾರಕ್ಕೆ ಇದೀಗ ಸ್ವಪಕ್ಷದ ಕಾರ್ಯಕರ್ತರಿಂದಲೇ ಭಾರಿ ವಿರೋಧ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಕ್ಕೆ ಏರದ ಮೂರಕ್ಕೆ ಇಳಿಯದ ಸ್ಥಿತಿಯಲ್ಲಿದ್ದ ಜೆಡಿಎಸ್ ಲೋಕ ಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದಕ್ಕೆ ತಲೆದಂಡ ತೆರಬೇಕಾಗಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜೆಡಿಎಸ್ ಕಾರ್ಯದರ್ಶಿ ಮಹಮ್ಮದ್ ಇಕ್ಬಾಲ್ ಎಲಿಮಲೆ ನೇತೃತ್ವದಲ್ಲಿ ನಲವತ್ತಕ್ಕೂ ಹೆಚ್ಚು ಮಂದಿ ಮುಖಂಡರು ಜೆಡಿಎಸ್ ಗೆ ರಾಜೀನಾಮೆ ನೀಡಿದ್ದಾರೆ. ಮಾತ್ರವಲ್ಲ ನೂರಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆಗೆ ತೀರ್ಮಾನಿಸಿದ್ದೇವೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.