ಕರಾವಳಿವೈರಲ್ ನ್ಯೂಸ್ಸುಳ್ಯ

ಸುಳ್ಯದಲ್ಲಿ ಬ್ಯಾನರ್ ಹರಿದದ್ದು ಯಾರು..? 40 ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಿದಾಗ ಪೊಲೀಸರಿಗೆ ತಿಳಿದ ಶಾಕಿಂಗ್ ವಿಚಾರ ಯಾವುದು..?

ನ್ಯೂಸ್ ನಾಟೌಟ್ : ಸುಳ್ಯದಲ್ಲಿ ಆಟೋ ರಿಕ್ಷಾ ಸಂಘದ ವತಿಯಿಂದ ಅಳವಡಿಸಿದ್ದ ಬ್ಯಾನರ್ ಹರಿದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣದ ಹಿಂದೆ ಯಾರಿದ್ದಾರೆ ಅನ್ನೋದನ್ನು ಹುಡುಕಾಡಿದ ಪೊಲೀಸರಿಗೆ ಹಲವು ಮಹತ್ವದ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.

ಆಟೋ ರಿಕ್ಷಾ ಚಾಲಕ ಮಾಲಕ ಸಂಘದವರು ನೀಡಿದ ದೂರಿನ ಮೇರೆಗೆ ಶನಿವಾರ ಜನವರಿ 6ರಂದು ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಈ ಪ್ರಕರಣದ ಜಾಡು ಹಿಡಿದು ತನಿಖೆಯನ್ನು ಕೂಡ ನಡೆಸಿದ್ದರು. ಈ ವೇಳೆ ಹಲವು ಮಹತ್ವದ ವಿಚಾರಗಳು ಕೂಡ ಬೆಳಕಿಗೆ ಬಂದಿದೆ. ಒಟ್ಟಾರೆಯಾಗಿ 40 ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಿದಾಗ ಪೊಲೀಸರಿಗೆ ಶಾಕಿಂಗ್ ವಿಚಾರ ತಿಳಿದು ಬಂದಿದೆ.

5.01.2024ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ಕಂಡುಬಂದ ಅಪರಿಚಿತ ವಯಸ್ಸಾದ ವ್ಯಕ್ತಿಯೋರ್ವ, ಸದರಿ ಬ್ಯಾನರ್ ಹರಿದು ತನ್ನ ಕೈಯಲ್ಲಿ ಹಿಡಿದುಕೊಂಡು, ಸುಳ್ಯ ಪೇಟೆಯಲ್ಲಿ ಸುತ್ತಾಡಿರುವುದು ತಿಳಿದುಬಂದಿರುತ್ತದೆ ಹಾಗೂ ಬಳಿಕ ಸುಳ್ಯದ ವಿವೇಕನಂದ ಸರ್ಕಲ್‌ ಬಳಿ ಹರಿದ ಬ್ಯಾನರ್ ತುಂಡನ್ನು ಇಟ್ಟು ರಾಮನ ಜಪ ಮಾಡಿದ್ದನ್ನು ಸಾರ್ವಜನಿಕರ ನೋಡಿರುವುದು ತನಿಖೆಯಿಂದ ತಿಳಿದುಬಂದಿರುತ್ತದೆ.

ಹರಿದ ಬ್ಯಾನರ್‌ ತುಂಡನ್ನು ಪರಿಶೀಲಿಸಲಾಗಿ ಅಯೋಧ್ಯೆಯ ಪೋಟೋಗಾಗಲಿ ಹಾಗೂ ಶ್ರೀರಾಮನ ಪೋಟೋಗಾಗಲಿ ಯಾವುದೇ ರೀತಿಯ ಹಾನಿಯಾಗಿರುವುದು ಕಂಡುಬಂದಿರುವುದಿಲ್ಲ. ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸ್ ಇಲಾಖೆ ಅಧಿಕಾರಿಗಳು ಅಧಿಕೃತ ಮಾಹಿತಿಯನ್ನು ನೀಡಿದ್ದಾರೆ.

Related posts

‘ಮೊಸಳೆ ಕಣ್ಣೀರು ಹಾಕುವ ಕಾಂಗ್ರೆಸ್ ನಾಟಕ ಬಟಾ ಬಯಲಾಗಿದೆ’ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ವಾಗ್ದಾಳಿ

ಸುಳ್ಯ:ಸರ್ದಾರ್ ವಲ್ಲಭಭಾಯಿ ಪಟೇಲ್​ ಜನ್ಮದಿನ:ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ

ಮುಳುಗಿದ ಗೂನಡ್ಕ, ತತ್ತರಿಸಿದ ಸಂಪಾಜೆ-ಕಲ್ಲುಗುಂಡಿ