ಸುಳ್ಯ

ಸುಳ್ಯ: ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಡಿ.ಸಿ.ಎಂ ಡಿ.ಕೆ.ಶಿವಕುಮಾರ್‌ ಭೇಟಿಯಾದ ಸುಳ್ಯ ಕಾಂಗ್ರೆಸ್ ನಿಯೋಗ

224

ನ್ಯೂಸ್‌ ನಾಟೌಟ್‌: ಸುಳ್ಯ ಕಾಂಗ್ರೆಸ್ ಮುಖಂಡರ ನಿಯೋಗವೊಂದು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಿಕೊಡುವಂತೆ ಬೆಂಗಳೂರಿನ ಕುಮಾರಕೃಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಅಲ್ಲದೇ ಸುಳ್ಯಕ್ಕೆ ಈ ಬಾರಿ ಮಹತ್ವದ ನಿಗಮಾಧ್ಯಕ್ಷತೆ ನೀಡಬೇಕು ಎನ್ನುವ ಬೇಡಿಕೆಯಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬಳಿಕ ಸ್ಪೀಕರ್‌ ಯು.ಟಿ. ಖಾದರ್‌, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ನಿಯೋಗ ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಮನವಿ ಸಲ್ಲಿಸಿದೆ.

ನಿಯೋಗದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಧನಂಜಯ ಅಡಂಗಾಯ, ಪ್ರಮುಖ ನಾಯಕರಾದ ಭರತ್ ಮುಂಡೋಡಿ, ಎನ್.ಜಯಪ್ರಕಾಶ್ ರೈ, ಪಿ.ಎಸ್.ಗಂಗಾಧರ್, ಗೀತಾ ಕೋಸ್ಟಾರ್, ರಾಜೀವಿ ಆರ್ ರೈ, ಅಬುಲ್ ಗಫೂರ್ ಕಲ್ಮಡ್ಕ, ಸದಾನಂದ ಮಾವಾಜಿ, ಸುರೇಶ್ ಅಮೈ, ಅಶೋಕ್ ಚೂಂತಾರು, ವಿಶ್ವನಾಥ ರೈ ಕಳಂಜ ಚಂದ್ರಲಿಂಗಂ ಐವರ್ನಾಡು, ಗುಣವರ್ಧನ ಕೆದಿಲ, ಕೀರ್ತನ್ ಕೊಡಪಾಲ, ಮೋಹನ್ ಮೊದಲಾದವರು ತಂಡದಲ್ಲಿದ್ದರು.

See also  110 ಕೆವಿ ವಿದ್ಯುತ್ ಸಬ್ ಸ್ಟೇಷನ್ ಗೆ ಶಂಕುಸ್ಥಾಪನೆ;ಸುಳ್ಯ ಜನತೆಯ ಬಹುವರ್ಷಗಳ ಬೇಡಿಕೆ ಈಡೇರಿಕೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget