ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವರಗುಂಡಿ ರಸ್ತೆಯಲ್ಲಿ ನಿನ್ನೆ ರಾತ್ರಿ ಭೂಕುಸಿತದಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.
ಈ ಕುರಿತು ಮಾಹಿತಿ ಪಡೆದ ಸ್ಥಳೀಯ ಪೆರುವಾಜೆ ಗ್ರಾಮ ಪಂಚಾಯತ್ ತಕ್ಷಣ ಸ್ಪಂದಿಸಿದೆ. ಭೂಕುಸಿತದಿಂದ ಹಾನಿಯಾದ ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ, ಗ್ರಾಮಕರಣಿಕರು ಶಿವರಾಜ್, ಪಂಚಾಯತ್ ಸದಸ್ಯರಾದ ಪದ್ಮನಾಭ ಶೆಟ್ಟಿ, ಗ್ರಾಮ ಪಂಚಾಯತ್ ಸಿಬ್ಬಂದಿ ದಯಾನಂದ ಪೆರುವಾಜೆ ಸುಗಮಸಂಚಾರಕ್ಕೆ ಅನುವು ಮಾಡಿಕೊಟ್ಟರು.