ಕರಾವಳಿ

ಸುಳ್ಯಕ್ಕೆ ಆಗಮಿಸಿದ ಡಿಕೆಶಿ, ಸ್ವಲ್ಪ ತಿಳುವಳಿಕೆ ಕಡಿಮೆ ಎಂದಿದ್ದು ಯಾರಿಗೆ?

582
Spread the love

ಸುಳ್ಯ: ಫೋನ್ ಸಂಭಾಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸುಳ್ಯ ನ್ಯಾಯಾಲಯಕ್ಕೆ ಹಾಜರಾದರು. ಇದಕ್ಕೂ ಮೊದಲು ಅವರನ್ನು ಪಕ್ಷದ ಕಾರ್ಯಕರ್ತರು ಆತ್ಮೀಯವಾಗಿ ಹಾರ ಹಾಕಿ ಸ್ವಾಗತಿಸಿದರು.

ಇದಕ್ಕೂ ಮೊದಲು ಮಂಗಳೂರಿನಲ್ಲಿ ಮಾತನಾಡಿದ್ದ ಡಿಕೆಶಿ, ನಾನು ಇಂಧನ ಸಚಿವನಾಗಿದ್ದಾಗ ಯಾರೋ ಒಬ್ಬ ತರ್ಲೆ ಫೋನ್ ಮಾಡಿದ್ದ. ನನ್ನ ಜೊತೆ ಬಾಯಿಗೆ ಬಂದ ಹಾಗೆ ಮಾತನಾಡಿದ್ದ, ಅವಾಚ್ಯ ಶಬ್ದಗಳಿಂದ ನನಗೆ ಬೈದಿದ್ದ. ಈ ವೇಳೆ ಅಧಿಕಾರಿಗಳಿಗೂ ಬಾಯಿಗೆ ಬಂದ ಹಾಗೇ ಬೈದಿದ್ದ. ನಮ್ಮ ಅಧಿಕಾರಿಗಳು ಅವನ ವಿರುದ್ಧ ದೂರು ನೀಡಿದ್ದರು ಎಂದರು. ಈ ವಿಚಾರವಾಗಿ ಸಾಕ್ಷಿ ಹೇಳಲು ಬರಬೇಕು ಅಂತಾ ನ್ಯಾಯಾಲಯ ಹೇಳಿತ್ತು. ಪ್ರಾರಂಭದಲ್ಲಿ ನನಗೂ ಈ ಬಗ್ಗೆ ಗೊತ್ತಾಗಲಿಲ್ಲ. ನಮಗೆಲ್ಲಾ ಈ ವಿಚಾರದಲ್ಲಿ ಸ್ವಲ್ಪ ತಿಳುವಳಿಕೆ ಕಡಿಮೆ. ಲುಕ್ ಔಟ್ ನೋಟಿಸ್, ಪೇಪರ್ ಅಲ್ಲಿ ಹಾಕ್ತೇವೆ ಆರ್ಡರ್ ಮಾಡಿದ್ದಾರೆ ಅಂತಾ ಗೊತ್ತಾಯ್ತು. ಕೋರ್ಟ್ ಆದೇಶಕ್ಕೆ ತಲೆ ಬಾಗಿ ಬಂದಿದ್ದೇನೆ. ನಾವೇ ಕಾನೂನು ಮಾಡಿದವರು, ಕಾನೂನಿಗೆ ಬೆಲೆ ನೀಡದಿದ್ದರೆ ಹೇಗೆ ಎಂದು ಡಿಕೆಶಿ ಪ್ರಶ್ನಿಸಿದರು.

See also  ಮತ್ತಷ್ಟು ರಂಗೇರಿದ ಸುಳ್ಯ ವಿಧಾನಸಭಾ ಚುನಾವಣಾ ಕಣ! ನಾಮಪತ್ರ ಹಿಂಪಡೆದ ಪಕ್ಷೇತರ ಅಭ್ಯರ್ಥಿ!
  Ad Widget   Ad Widget   Ad Widget   Ad Widget   Ad Widget   Ad Widget