ದಕ್ಷಿಣ ಕನ್ನಡಸುಳ್ಯ

ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮಿಂಚಿದ ಕ್ಷಮಾ, ಸುಳ್ಯ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಏಷ್ಯನ್ ಗೇಮ್ಸ್ ಗೆ ಆಯ್ಕೆ

234
Yellow Background

ನ್ಯೂಸ್ ನಾಟೌಟ್: ಜು.೧೪ರಂದು ಉದ್ಯಾನನಗರಿ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಯ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕ್ಷಮಾ ಟ್ರೆಡಿಶನಲ್ ಯೋಗ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಏಷ್ಯನ್ ಗೇಮ್ಸ್ ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿರುವ ಕ್ಷಮಾ ಅಜ್ಜಾವರದ ಮುಡೂರು ತೀರ್ಥರಾಮ ದಂಪತಿಯ ಪುತ್ರಿಯಾಗಿದ್ದಾರೆ.

Yellow Background

ಹತ್ತನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮದ ಹಿನ್ನೆಲೆಯಲ್ಲಿ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಮತ್ತು ಎಸ್ ಜಿಎಸ್ ಇಂಟರ್ ನ್ಯಾಷನಲ್ ಯೋಗ ಪೌಂಡೇಷನ್ ಕಾಲೇಜು ಮತ್ತು ರಿಸರ್ಚ್ ಸೆಂಟರ್ ಜಂಟಿ ಆಶ್ರಯದಲ್ಲಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಕಾರದಲ್ಲಿ ಕೂಟವನ್ನು ಆಯೋಜಿಸಲಾಗಿತ್ತು.

See also  ಕಲ್ಲುಗುಂಡಿ: ದ್ವಿಚಕ್ರ ವಾಹನ- ರಿಕ್ಷಾ ನಡುವೆ ಅಪಘಾತ ಸವಾರನ ತಲೆಗೆ ಗಾಯ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget