ಕರಾವಳಿ

ಸುಳ್ಯ ಹಬ್ಬ ಸಮಿತಿ ಅಧ್ಯಕ್ಷರಾಗಿ ಪಿ.ಸಿ ಜಯರಾಮ ಪುನರಾಯ್ಕೆ

ಸುಳ್ಯ : ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮದಿನವನ್ನು ಕೆ.ವಿ.ಜಿ. ಸುಳ್ಯ ಹಬ್ಬ ವನ್ನಾಗಿ ಆಚರಿಸುತ್ತಿರುವ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಪಿ.ಸಿ.ಜಯರಾಮ್ ಪುನರಾಯ್ಕೆಯಾಗಿದ್ದಾರೆ.  ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಾಕ್ಷಿ ಜೆ ರೈ , ಖಜಾಂಚಿಯಾಗಿ ದಿನೇಶ್ ಮಡ್ತಿಲ ಅವರು ಕೂಡ ಮುಂದಿನ ವರ್ಷಕ್ಕೆ ಮರು ಆಯ್ಕೆಗೊಂಡರು. ಸಮಿತಿಯ 2020 – 2021 ನೇ ಸಾಲಿನ ಮಹಾಸಭೆ ಇಂದು ಕೆವಿಜಿ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ಪಿ.ಸಿ.ಜಯರಾಮ್ ವಹಿಸಿದ್ದರು. ಸಮಿತಿಯ ಗೌರವಾಧ್ಯಕ್ಷ ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ. ವಿ . ಚಿದಾನಂದ ಮುಖ್ಯ ಅತಿಥಿಯಾಗಿದ್ದರು. ಸಮಿತಿಯ ಗೌರವ ಸಲಹೆಗಾರ ಡಾ.ಹರಪ್ರಸಾದ್ ತುದಿಯಡ್ಕ, ನಿಕಟಪೂರ್ವ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ,ಪ್ರಧಾನ ಕಾರ್ಯದರ್ಶಿ ಚಂದ್ರಾಕ್ಷಿ ಜೆ ರೈ, ಖಜಾಂಚಿ ದಿನೇಶ್ ಮಡ್ತಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆರಂಭದಲ್ಲಿ ಪಿ ಸಿ ಜಯರಾಮರು ಸ್ವಾಗತಿಸಿದರು ಬಳಿಕ ಚಂದ್ರಾಕ್ಷಿ ಜೆ.ರೈ ಯವರು ಕಳೆದ 1 ವರ್ಷದ ಕಾರ್ಯಕ್ರಮಗಳ ವರದಿ ವಾಚಿಸಿದರು. ದಿನೇಶ್ ಮಡ್ತಿಲ ರವರು ಲೆಕ್ಕಪತ್ರ ಮಂಡಿಸಿದರು.

Related posts

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ರಿಕ್ಷಾ ಡಿಕ್ಕಿ,ನಾಲ್ಕು ತಿಂಗಳ ಗರ್ಭಿಣಿ ಸ್ಥಳದಲ್ಲೇ ಮೃತ್ಯು

ಸುಳ್ಯ:ರಸ್ತೆ ದಾಟುತ್ತಿದ್ದ ಮಹಿಳೆಗೆ ಯಮಸ್ವರೂಪಿಯಾದ ಲಾರಿ,ಏನಿದು ಘಟನೆ?

ಸರ್ಕಾರ ಮುಸ್ಲಿಂ ಓಲೈಕೆ ಮಾಡಿದ್ರೆ ಪರಿಣಾಮ ನೆಟ್ಟಗಿರಲ್ಲ ಎಂದದ್ದೇಕೆ ಸುನೀಲ್ ಕುಮಾರ್? ಅಷ್ಟಕ್ಕೂ ಶಾಸಕ ತನ್ವೀರ್ ಸೇಠ್ ಗೃಹ ಸಚಿವರಿಗೆ ಬರೆದ ಪತ್ರದಲ್ಲೇನಿದೆ?