ಕ್ರೈಂ

ಸುಳ್ಯ: ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಕೇಸ್‌?

347
Spread the love

ಸುಳ್ಯ: ಕಾರೊಂದು ಪಲ್ಟಿಯಾಗಿ ಅದರಲ್ಲಿದ್ದ ಅನ್ಯಕೋಮಿನ ಯುವಕ-ಯುವತಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಬೆನ್ನಲ್ಲೇ ಅವರ ಮೇಲೆ ಹಲ್ಲೆ ನಡೆಸಲು ಬಂದ ಆರೋಪದಲ್ಲಿ ಹಿಂದೂ ಸಂಘಟನೆಯ ನಾಲ್ಕು ಮಂದಿ ಕಾರ್ಯಕರ್ತರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎನ್ನಲಾಗಿದೆ.

ಮಂಗಳವಾರ ಆಲೆಟ್ಟಿ ರಸ್ತೆಯಲ್ಲಿ ಕೇರಳದ ಬಂದಡ್ಕ ಕಡೆಯಿಂದ ಬಂದ ಬ್ಯಾಲೆನೊ ಕಾರು ಅತೀ ವೇಗದಿಂದ ಬಂದು ನಾಗಪಟ್ಟಣ ವಿಶ್ರಾಂತಿ ಗೃಹದ ಬಳಿಯ ತಿರುವಿನಲ್ಲಿ ಪಲ್ಟಿಯಾಗಿತ್ತು. ಮಡಿಕೇರಿ ಮೂಲದ ಅನ್ಯಕೋಮಿನ ಯುವಕ ಮತ್ತು ಯುವತಿ ಕಾರಿನಲ್ಲಿದ್ದರು. ಇವರಿಬ್ಬರು ಕೇರಳದ ಬಂದಡ್ಕ ಕಡೆಯಿಂದ ಕೋಲ್ಚಾರು ಮಾರ್ಗವಾಗಿ ಹಿಂತಿರುಗಿ ಬರುತ್ತಿದ್ದರು. ಕಾರಲ್ಲಿದ್ದ ಇಬ್ಬರು ಸಣ್ಣ ಪುಟ್ಟ ಗಾಯಗೊಂಡು ಪ್ರಾಣಾ ಪಾಯದಿಂದ ಪಾರಾಗಿದ್ದರು. ಈ ವೇಳೆ ವಿಷಯ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರು. ಅವರು ಹಲ್ಲೆ ಮಾಡಿದ್ದಾರೆ ಎಂದು ಯುವಕ-ಯುವತಿ ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

See also  ಸಂಪಾಜೆ ಬಂಗ್ಲೆಗುಡ್ಡೆ: ಆತ್ಮಹತ್ಯೆಗೆ ಶರಣಾದ ಯುವಕ
  Ad Widget   Ad Widget   Ad Widget   Ad Widget   Ad Widget   Ad Widget