ಕರಾವಳಿಕ್ರೈಂ

ಜಾಲ್ಸೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಯ ಪಾಲಿಗೆ ಯಮನಾದ ಬೈಕ್ , ತಲೆಗೆ ಗಂಭೀರ ಗಾಯಗೊಂಡು ಉಸಿರು ನಿಲ್ಲಿಸಿದ ವ್ಯಕ್ತಿ

ನ್ಯೂಸ್ ನಾಟೌಟ್: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಬೈಕ್ ಗುದ್ದಿದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆ ಗುರುವಾರ ಸುಳ್ಯ ಸಮೀಪದ ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ನಡೆದಿದೆ.

ದುರ್ಘಟನೆಯಲ್ಲಿ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ ಉಸಿರು ಚೆಲ್ಲಿದ್ದಾರೆ. ಅವರಿಗೆ 72 ವರ್ಷವಾಗಿತ್ತು. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ ಅವರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ಮುಖ್ಯರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪುತ್ತೂರು ಕಡೆಯಿಂದ ಬಂದ ಬೈಕ್ ಪುರುಷೋತ್ತಮ ಅವರಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ತಲೆಗೆ ಗಂಭೀರವಾಗಿ ಗಾಯವಾಗಿದೆ. ಅವರನ್ನು ತಕ್ಷಣ ಸ್ಥಳೀಯರು ರಿಕ್ಷಾದಲ್ಲಿ ಸುಳ್ಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ವೈದ್ಯರ ಸಲಹೆಯಂತೆ ಅಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

Related posts

ಬಿಜೆಪಿ ಯುವ ಮೋರ್ಚಾ ನಾಯಕ ಭೀಕರ ಹತ್ಯೆ

ಕಟೀಲು ಯಕ್ಷಗಾನ ಮೇಳದ ಮಹತ್ವದ ಪ್ರಕಟಣೆ

ಸುಳ್ಯ: ಆಟೋ ರಿಕ್ಷಾದಿಂದ ಹೊರಗೆಳೆದು ಯುವಕನಿಗೆ ಹಿಗ್ಗಾಮುಗ್ಗಾ ಹಲ್ಲೆ..! ಆಸ್ಪತ್ರೆಗೆ ದಾಖಲಾದ ಯುವಕ, ಪೊಲೀಸ್ ಠಾಣೆಯಲ್ಲಿ ದೂರು ದಾಖಲು