ಕರಾವಳಿಸುಳ್ಯ

ಸುಳ್ಯ: ಗ್ರಾಮಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಜಿಲ್ಲಾ ಪಂಚಾಯತ್ ಸಿಇಒ, ಮಕ್ಕಳ ಜೊತೆಗೆ ಮಕ್ಕಳಾಗಿ ಬೆರೆತು ಸಮಸ್ಯೆ ಆಲಿಸಿದ ಅಧಿಕಾರಿ

259

ಸುಳ್ಯ ತಾಲೂಕು ಪಂಚಾಯತ್ ವ್ಯಾಪ್ತಿಯ ಹಾಗೂ ಸುಳ್ಯ ತಾಲೂಕಿನ ಹಲವು ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ಭೇಟಿ ವಿವಿಧ ಕಾಮಗಾರಿಗಳ ಪರಿಶೀಲನೆ ಇಂದು(ಜುಲೈ 12) ನಡೆಸಿದರು.

ಸುಳ್ಯ ತಾಲೂಕಿನ ನಾನಾ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಲು ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾದ ಡಾ. ಆನಂದ್ ಕೆ ಸುಳ್ಯದಲ್ಲಿ ಇರರ ಅಧಿಕಾರಿಗಳ ಜೊತೆ ತೆರಳಿದ್ದರು. ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಘನ ತ್ಯಾಜ್ಯ ಘಟಕ, ಅಮೃತ ಉದ್ಯಾನ ವನ ಹಾಗೂ ಕೇಂದ್ರ ಸರಕಾರದ ಹರ್ ಘರ್ ಗಂಗಾ ಕಾರ್ಯಕ್ರಮದ ಕಾಮಗಾರಿಗಳು ಸೇರಿದಂತೆ ಇತರ ಕಾಮಗಾರಿಗಳನ್ನು ಪರಿಶೀಲಿಸಿ, ಪ್ರಸ್ತುತ ಸ್ಥಿತಿಗತಿ ಮತ್ತು ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆ ನೀಡಿದರು.

ಅರಂತೋಡು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಜೊತೆಗೆ ಮಕ್ಕಳಾಗಿ ಬೆರೆತು ಅಲ್ಲಿನ ವ್ಯವಸ್ಥೆಗಳ ಕುರಿತಾಗಿ ಮಾಹಿತಿ ಪಡೆದರು. ಅಲ್ಲದೇ ಆಲೆಟ್ಟಿ ಗ್ರಾಮದ ಅರಂಬೂರು ಸರಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ವಿಧ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮವನ್ನು ನಡೆಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಇಒ ಭಾವನಿಶಂಕರ್, ಇಂಜಿನಿಯರಿಂಗ್ ವಿಭಾಗದ ಸೂರಯ್ಯ ಮತ್ತು ಮಣಿಕಂಠ ಹಾಗು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತಿತರಿದ್ದರು.

See also  ಸುಳ್ಯ: ಧರೆಗುರುಳಿದ ಯಕ್ಷದ್ರೋಣ ಬಣ್ಣದ ಮಾಲಿಂಗರ 15 ಅಡಿ ಎತ್ತರದ ಯಕ್ಷಪ್ರತಿಮೆ, ಜೊತೆಯಾಗಿ ವೇಷ ಕಟ್ಟಿದ್ದ ಕಲಾವಿದನ ಪ್ರತಿಮೆ ಉರುಳಿದಾಗ ಕಣ್ಣೀರಿಟ್ಟ ಹಿರಿಯ ಕಲಾವಿದ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget