ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ಇಂಧನ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿದರು. ಬಳಿಕ ದೇವರ ದರ್ಶನ ಪಡೆದು ಆಶ್ಲೇಷ ಬಲಿ ಪೂಜೆ ನೆರವೇರಿಸಿ ನಂತರ ಶ್ರೀ ಸಂಪುಟ ನರಸಿಂಹ ಮಠದ ಯತಿವರ್ಯ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥರಿಂದ ಪ್ರಸಾದ ಸ್ವೀಕರಿಸಿದರು. ಇದಾದ ಬಳಿಕ ಹೊಸಳಿಗಮ್ಮ ದೈವಸ್ಥಾನದ ಬಳಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.