ನ್ಯೂಸ್ ನಾಟೌಟ್: ಸುಳ್ಯದ ಕುರುಂಜಿ ಭಾಗ್ ಬಳಿ ಕ್ಷುಲ್ಲಕ ವಿಷಯಕ್ಕೆ ಎರಡು ತಂಡಗಳ ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಘಟನೆ ಜೂ.10ರಂದು ರಾತ್ರಿ ನಡೆದಿದೆ. ಘಟನೆ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ್ದಾರೆ. ಯುವಕರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಆರೋಪಿಗಳ ಮೇಲೆ ಅ.ಕ್ರ ನಂ: 65/2025 ಕಲಂ: 189.(2)191(2)115(2)352 351(2) 190 BNS 2023 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾತ್ರಿಯೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.