ಕರಾವಳಿಶಿಕ್ಷಣಸುಳ್ಯ

ಸುಳ್ಯ: ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹೊಸ ಕೋರ್ಸ್ ಪ್ರಾರಂಭಿಸಲು ಎ.ಐ.ಸಿ.ಟಿ.ಇ. ಅನುಮತಿ

216

ನ್ಯೂಸ್ ನಾಟೌಟ್: ಪ್ರಸಕ್ತ 2023-24ನೇ ಸಾಲಿನಲ್ಲಿ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹೊಸ ಕೋರ್ಸ್ ಕಂಪ್ಯೂಟರ್ ಇಂಜಿನಿಯರಿಂಗ್ ಪ್ರಾರಂಭಿಸಲು ಹಾಗೂ ಎಂ.ಬಿ.ಎ ಸೀಟು ಹೆಚ್ಚಳಕ್ಕೆ ನವದೆಹಲಿಯ ಎ.ಐ.ಸಿ.ಟಿ.ಇ. (ಆಲ್‌ ಇಂಡಿಯಾ ಕೌನ್ಸಿಲ್‌ ಫಾರ್‌ ಟೆಕ್ನಿಕಲ್‌ ಎಜುಕೇಶನ್‌) ಅನುಮತಿ ನೀಡಿದೆ.

ಈಗಾಗಲೇ 2022-23ನೇ ಸಾಲಿನ ಇಂಜಿನಿಯರಿಂಗ್ ದಾಖಲಾತಿಗಳು ಪ್ರಾರಂಭವಾಗಿದ್ದು, ಇಂಜಿನಿಯರಿಂಗ್ ವಿಭಾಗಗಳಾದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಆ್ಯಂಡ್‌ ಮಷಿನ್ ಅರ್ನಿಂಗ್) ಕಂಪ್ಯೂಟರ್ ಇಂಜಿನಿಯರಿಂಗ್ ಎಲೆಕ್ಟ್ರಾನಿಕ್ಸ್‌ ಆ್ಯಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಲಿಂಗ್ ಸಿವಿಲ್‌ ಇಂಜಿನಿಯರಿಂಗ್ ವಿಭಾಗಗಳಿಗೆ ದಾಖಲಾತಿ ಪಡೆಯಬಹುದಾಗಿದೆ.

ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಡಳಿತ ಮಂಡಳಿ ತಿಳಿಸಿದೆ. ಹೊಸ ಕೋರ್ಸು ಸೇರ್ಪಡೆ ಹಾಗೂ ಸೀಟು ಹೆಚ್ಚಳಕ್ಕೆ ಕೆವಿಜಿ ಚಾರಿಟೆಬಲ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ. ರೇಣುಕಾಪ್ರಸಾದ್ ಕೆ.ವಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ಪ್ರಾಂಶುಪಾಲ ಡಾ. ಸುರೇಶ ವಿ, ಉಪ ಪ್ರಾಂಶುಪಾಲ ಡಾ. ಶ್ರೀಧರ ಕೆ. ಹರ್ಷ ವ್ಯಕ್ತಪಡಿಸಿದ್ದಾರೆ.

See also  ಫುಟ್ಬಾಲ್ ನಲ್ಲಿ ಗಿನ್ನಿಸ್ ದಾಖಲೆ ಸಾಧಿಸಿದ ಮಂಗಳೂರು ಹುಡುಗ,ವಿಶ್ವದ ಇಬ್ಬರ ದಾಖಲೆ ಮುರಿದು ಸಾಧನೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget