ನ್ಯೂಸ್ ನಾಟೌಟ್ : ಕೆವಿಜಿ ಕಾನೂನು ಕಾಲೇಜಿನಲ್ಲಿ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ ) ಇದರ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಧ್ವಜಾರೋಹಣ ನೆರವೇರಿಸಿ, ” ಸ್ವಾತಂತ್ರ್ಯ ಕ್ಕೆ ಕಾರಣಕರ್ತರಾದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸುವುದು ಭಾರತದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ ಎಂದು ಹೇಳಿದರು.
ಕಾನೂನು ಕಾಲೇಜಿನ ಆಡಳಿತಧಿಕಾರಿ ಪ್ರೊ. ಕೆ ವಿ ದಾಮೋದರ ಗೌಡ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ಕೋರಿದರು. ಕಾಲೇಜಿನ ಪ್ರಾoಶುಪಾಲೆ ಪ್ರೊ .ಟೀನಾ ಎಚ್. ಎಸ್. ಸ್ವಾಗತಿಸಿದರು. ವಿದ್ಯಾರ್ಥಿ ನಾಚಪ್ಪ ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ಭೋದಕ, ಭೋದಕೇತರ ವೃoದದವರು , ವಿದ್ಯಾರ್ಥಿಗಳು ಉಪಸ್ಥಿತರಿದ್ದರು.