ನ್ಯೂಸ್ ನಾಟೌಟ್: ಕೆವಿಜಿ ಕಾನೂನು ಕಾಲೇಜಿನ ರೆಡ್ ಕ್ರಾಸ್ ಘಟಕದಿಂದ ಸಾಂದೀಪ್ ವಿಶೇಷ ಮಕ್ಕಳ ಶಾಲೆಗೆ ಶುಕ್ರವಾರ ಭೇಟಿ ನೀಡಲಾಯಿತು. ಶಾಲೆಯ ಸ್ಥಾಪಕಾಧ್ಯಕ್ಷ ಎಂಬಿ ಸದಾಶಿವ ಹಾಗೂ ಅವರ ಪತ್ನಿ ಶಾಲೆಯ ಮುಖ್ಯೋಪಾಧ್ಯಾಯಿನಿ ಹರಿಣಿ ಸದಾಶಿವ ಎಲ್ಲರನ್ನೂ ಸ್ವಾಗತಿಸಿದರು.
ಇದೇ ವೇಳೆ ಮಾತನಾಡಿದ ಎಂ.ಬಿ ಸದಾಶಿವ ಅವರು, ವಿಶೇಷ ಚೇತನ ಮಕ್ಕಳನ್ನು ತರಬೇತುಗೊಳಿಸಿ ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಮುಖ್ಯೋಪಾದ್ಯಾಯಿನಿ ಹರಿಣಿ ಸದಾಶಿವ ಅವರು ವಿಶೇಷ ಚೇತನ ಮಕ್ಕಳ ತರಬೇತಿಯ ವಿವಿಧ ಹಂತಗಳನ್ನು ವಿವರಿಸಿದರು. ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲ ಉದಯಕೃಷ್ಣ. ಬಿ, ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ. ಹೆಚ್. ಎಸ್, ರೆಡ್ ಕ್ರಾಸ್ ಘಟಕದ ಸಂಯೋಜಕಿಯರಾದ ಅರ್ಚನಾ.ಕೆ ಮತ್ತು ರಚನಾ.ಕೆ, ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು, ಸಾಂದೀಪ್ ಶಾಲೆಯ ಶಿಕ್ಷಕರು ಪಾಲ್ಗೊಂಡಿದ್ದರು.