ಕೆವಿಜಿ ಕ್ಯಾಂಪಸ್‌

ಸುಳ್ಯ: ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ ಎನ್.ಎಸ್.ಎಸ್. ಮತ್ತು ರೆಡ್‌ಕ್ರಾಸ್ ಘಟಕ ಉದ್ಘಾಟನೆ

ನ್ಯೂಸ್ ನಾಟೌಟ್ : ಸುಳ್ಯದ ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೆಡ್‌ಕ್ರಾಸ್ ಘಟಕದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ತಾಲೂಕು ರೆಡ್‌ಕ್ರಾಸ್ ಘಟಕಾಧಿಕಾರಿ ಮತ್ತು ನೆಹರು ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಂಜೀವ ಕುದ್ಪಾಜೆ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ| ಉದಯಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತಾಧಿಕಾರಿ ಪ್ರೊ. ದಾಮೋದರ ಗೌಡ ಕೆ.ವಿ., ಎರಡೂ ಘಟಕಗಳ ಘಟಕಾಧಿಕಾರಿಗಳಾದ ನಯನ ಪಿ.ಯು., ಅರ್ಚನ ಆರ್. ರೈ, ವಿದ್ಯಾರ್ಥಿ ನಾಯಕರಾದ ನಾಚಪ್ಪ ಸಿ.ಎನ್., ಮತ್ತು ವನ್ಯಶ್ರೀ ಹೆಚ್. ಭಾಗವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿನಿ ಸಮೀಕ್ಷ ಕಾರ್ಯಕ್ರಮ ನಿರೂಪಿಸಿದರು.

Related posts

ಸುಳ್ಯ: ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

ಸುಳ್ಯ: ಎನ್ನೆಂಸಿಯ ಯುವ ರೆಡ್‌ಕ್ರಾಸ್ ಘಟಕದಿಂದ ರಸ್ತೆ ಸುರಕ್ಷತಾ ಮತ್ತು ಮಾದಕ ವ್ಯಸನ ಜಾಗೃತಿ ಮಾಹಿತಿ ಕಾರ್ಯಾಗಾರ

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಾಹಿತಿ ಕಾರ್ಯಾಗಾರ