ನ್ಯೂಸ್ ನಾಟೌಟ್: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಹತ್ವವನ್ನು ತಿಳಿಸಲು ಜಾಗೃತಿ ಕಾರ್ಯಕ್ರಮವನ್ನು ಆ7 ಗುರುವಾರದಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಅಧ್ಯಕ್ಷರು ಹಾಗೂ ವೈದ್ಯಕೀಯ ನಿರ್ದೇಶಕ ಡಾ ಕೆ.ವಿ ಚಿದಾನಂದ ವಹಿಸಿ ಮಾತನಾಡಿದರು. ಅಂಗಾಂಗ ದಾನದ ಮಹತ್ವದ ಕುರಿತು ವಿಶೇಷ ಮಾಹಿತಿಯನ್ನು ಹಂಚಿಕೊಂಡರು. ಬಳಿಕ ಕಾರ್ಯಕ್ರಮದ ಮುಖ್ಯ ಅಂಗವಾಗಿ ಕಾಲೇಜಿನ ಮೆಡಿಕಲ್ ಸೂಪರಿಂಟೆಂಡೆಂಟ್ ಪ್ರೊ. ಡಾ. ಸಿ ರಾಮಚಂದ್ರ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿದರು. ಮಾತನಾಡುತ್ತಾ ಅಂಗಾಂಗ ದಾನ ಎಂದರೇನು, 18 ವರ್ಷಕ್ಕೆ ಮೇಲ್ಪಟ್ಟ ಎಲ್ಲರೂ ಅಂಗಾಂಗ ದಾನ ಮಾಡಬಹುದು, ಮತ್ತು ಅಂಗಾಂಗ ಕಸಿ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬ ಮಾಹಿತಿಯನ್ನು ನೀಡಿದರು.
ವೇದಿಕೆಯಲ್ಲಿ ಕಾಲೇಜಿನ ಡೀನ್ ಡಾ ನೀಲಾಂಬಿಕೈ ನಟರಾಜನ್, ಡಾ ನಮೃತಾ ಕೆ.ಜಿ, ಡಾ ಗೀತಾ ದೊಪ್ಪಾ, ಪ್ರೊ. ಡಾ ರವಿಕಾಂತ್ ಜಿ. ಒ, ಡಾ ದಿನೇಶ್ ಪಿವಿ ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಪ್ರಾಂಶುಪಾಲೆ ಚಂದ್ರಾವತಿ ಸೇರಿದಂತೆ ಕೆವಿಜಿ ಸಹ ಸಂಸ್ಥೆಯ ಪ್ರಾದ್ಯಾಪಕರು ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು. ಉಪನ್ಯಾಸ ಕಾರ್ಯಕ್ರಮದ ಬಳಿಕ ಕಿರು ಪ್ರಹಸನ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಡಾ. ನಮೃತಾ ಕೆ ಜಿ ಸ್ವಾಗತಿಸಿದರು. ತೃತೀಯ ಎಂಬಿಬಿಎಸ್ ವಿದ್ಯಾರ್ಥಿನಿ ರಕ್ಷಿತಾ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ -ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.