ನ್ಯೂಸ್ ನಾಟೌಟ್: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಕ್ಟೋಬರ್ 11 ರಂದು ಆಯುಧ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ| ಕೆ ವಿ ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಉಪಾಧ್ಯಕ್ಷೆ ಶೋಭಾ ಚಿದಾನಂದ, ಕಾಲೇಜಿನ ಡೀನ್ ಡಾ ನೀಲಾಂಬಿಕೈ ನಟರಾಜನ್, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.