Latestಸುಳ್ಯ

ಸುಳ್ಯ: ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ ಆಚರಣೆ, ಟಿ.ಎಂ ಶಾಹಿದ್ ತೆಕ್ಕಿಲ್ ನೇತೃತ್ವದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

531

ನ್ಯೂಸ್ ನಾಟೌಟ್: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ 83ನೇ ವರ್ಷದ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಧ್ಯಕ್ಷ ಟಿ. ಎಂ ಶಹೀದ್ ತೆಕ್ಕಿಲ್ ನೇತೃತ್ವದಲ್ಲಿ ಸುಳ್ಯ ಕಾಂಗ್ರೆಸ್ ಮುಖಂಡರು ಇಂದು ಸುಳ್ಯದ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.

ಈ ವೇಳೆ ಮಾತನಾಡಿದ ಟಿ.ಎಂ ಶಾಹಿದ್ ತೆಕ್ಕಿಲ್ ಅವರು, ‘ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಒಬ್ಬ ಸಾಮಾನ್ಯ ಕುಟುಂಬದಲ್ಲಿ ಜನಿಸಿ ತಮ್ಮ ಧೀಮಂತ ನಾಯಕತ್ವ ಮತ್ತು ಜನಪರ ಕೆಲಸಗಳಿಂದ ಇಂದು ಅತ್ಯುನ್ನತ ಸ್ಥಾನಕ್ಕೆ ಏರಿದ್ದಾರೆ. ಸಂವಿಧಾನಕ್ಕೆ ಅಪಾಯ ಎದುರಾಗುವ ಸನ್ನಿವೇಶ ಬಂದಾಗ, ಪರಿಶಿಷ್ಟರಿಗೆ ಹಿಂದುಳಿದವರಿಗೆ ಬಡವರಿಗೆ ಅನ್ಯಾಯವಾದ ಸಂದರ್ಭದಲ್ಲಿ, ಅಂಬೇಡ್ಕರ್ ತತ್ವವನ್ನು ಮೈಗೂಡಿಸಿಕೊಂಡು ದೇಶದ ಗಟ್ಟಿಧ್ವನಿಯಾಗಿ ನಮ್ಮೊಂದಿಗೆ ಇದ್ದಾರೆ ಎಂದು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು, ಸುಳ್ಯ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರ, ಸುಳ್ಯ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಚೇತನ್ ಕಜೆಗದ್ದೆ, ಸುಳ್ಯ ನಗರ ಕಾಂಗ್ರೆಸ್ ನ ಅಧ್ಯಕ್ಷ ಶಶಿಧರ ಎಂ ಜೆ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಭವಾನಿಶಂಕರ ಕಲ್ಮಡ್ಕ, ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಗೋಕುಲ್ ದಾಸ್ ಸುಳ್ಯ, ಆರೋಗ್ಯ ರಕ್ಷಾ ಸಮಿತಿ ಸದಸ್ಯರುಗಳಾದ ಶಹೀದ್ ಪಾರೆ, ಅಬ್ದುಲ್ ರಜಾಕ್ (ಪ್ರಗತಿ ಅಚ್ಚು), ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರು ಮತ್ತು ಬ್ಲಾಕ್ ಕಾಂಗ್ರೆಸ್ ವಕ್ತಾರರಾದ ನಂದರಾಜ ಸಂಕೇಶ್, ನಗರ ಪಂಚಾಯತ್ ಸದಸ್ಯ ಡೇವಿಡ್ ಧೀರಾ ಕ್ರಾಸ್ತಾ, ಬಾಲಸುಬ್ರಹ್ಮಣ್ಯ ಮೋಂಟಡ್ಕ, ಯುವ ಕಾಂಗ್ರೆಸ್ ಸದಸ್ಯರುಗಳಾದ ರಕ್ಷಿತ್ ಗೂನಡ್ಕ, ಮನೋಜ್ ಅಡ್ಯಡ್ಕ, ಇಬ್ರಾಹಿಂ ಜಯನಗರ, ಮಂಜುನಾಥ ಮಡ್ತಿಲ, ಸರಸ್ವತಿ ಬೊಳಿಯಮಜಲು, ಹಾಜಿರ ಗಫೂರ್ ಕಲ್ಮಡ್ಕ ಮತ್ತಿತರರು ಉಪಸ್ಥಿತರಿದ್ದರು. ಆಸ್ಪತ್ರೆಯ ಸಿಬ್ಬಂದಿಗಳು ಹಣ್ಣುಹಂಪಲು ವಿತರಣೆಗೆ ಸಹಕರಿಸಿದರು. ಶಶಿಧರ್ ಎಂ ಜೆ ಸ್ವಾಗತಿಸಿ ನಂದರಾಜ್ ಸಂಕೇಶ್ ವಂದಿಸಿದರು. ಇದೇ ವೇಳೆ ಸುಳ್ಯ ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಡಾಕ್ಟರ್ ನಂದಕುಮಾರ್ ಅವರ ಪುತ್ರ ಆಸ್ತಿಕ್ ರಾಘವ್ ಬಾಳಿಕಳ ಅವರ ಅಕಾಲಿಕ ನಿಧನಕ್ಕೆ ಒಂದು ನಿಮಿಷ ಮೌನ ವೃತ ಆಚರಿಸಿ ಸಂತಾಪ ಸೂಚಿಸಲಾಯಿತು.

See also  ಸುಳ್ಯ: 23 ಮಂದಿ ಪೌರಕಾರ್ಮಿಕರಿಗೆ ಕಿಟ್ ವಿತರಣೆ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಕಾರ್ಯಕ್ಕೆ ಮೆಚ್ಚುಗೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget