ನ್ಯೂಸ್ ನಾಟೌಟ್: ಮರ್ಕಂಜ ಸಮೀಪದ ಬೊಮ್ಮಾರು ಎಂಬಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಬಾವಿಯೊಳಗೆ ಪತ್ತೆಯಾಗಿದೆ. ವಿಷಯ ತಿಳಿದು ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ಕೂಡ ಸ್ಥಳಕ್ಕೆ ತೆರಳಿದ್ದಾರೆ. ಶಿವ ಆಂಬ್ಯುಲೆನ್ಸ್ ಮೂಲಕ ಮೃತದೇಹವನ್ನು ತೆಗೆದುಕೊಂಡು ಬರಲಾಗುತ್ತಿದೆ ಎಂದು ತಿಳಿದು ಬಂದಿದೆ. ಮೃತಪಟ್ಟವರ ಹೆಸರನ್ನು ಶೀನ ಪೂಜಾರಿ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.